ಹಾಸನ: ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಆಸ್ತಿವಿವರಗಳ ತಪ್ಪು ನಮೂದನೆ ಆರೋಪ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿಯಾಗಿದ್ದ ಎ.ಮಂಜು ಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ಎರಡು ಬಾರಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ನೋಟಿಸ್ ನೀಡಿದರೂ ಬಾರದ ಪ್ರಜ್ವಲ್ ಗೆ ಮತ್ತೊಂದು ನೋಟಿಸ್ ಬಂದಿದೆ. ಈ ನೋಟಿಸ್ ಪ್ರತಿ ಹಾಸನದ ಮುದ್ರಣ ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ. ಈ ತಿಂಗಳ ೩೦ರಂದು ಕೋರ್ಟ್ಗೆ ಹಾಜರಾಗುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ.