Connect with us

Featured

ಅನುಷ್ಕಾ ಶೆಟ್ಟಿಯ ಕನ್ನಡ ಪ್ರೀತಿ : ರಶ್ಮಿಕಾಗೆ ಟಾಂಗ್​ ಕೊಟ್ಟರಾ ಸ್ವೀಟಿ..?

ಹೈದರಾಬಾದ್​ : ನಟಿ ಅನುಷ್ಕಾ ಶೆಟ್ಟಿ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಕಳೆದ 10 ವರ್ಷಗಳಿಂದ ತೆಲುಗು ಮತ್ತು ತಮಿಳು ಭಾಷೆಯಲ್ಲಿ ನಂಬರ್​ ಒನ್​ ನಟಿಯಾಗಿರೋ ಅನುಷ್ಕಾ ಶೆಟ್ಟಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಕನ್ನಡದಲ್ಲಿ ಸಿನಿಮಾ ಮಾಡದೇ ಇದ್ರೂ, ಕನ್ನಡವನ್ನ ಅಚ್ಚುಕಟ್ಟಾಗಿ ಮಾತನಾಡುತ್ತಾರೆ. ಇತರೆ ತಾರೆಯರಂತೆ ನನಗೆ ಕನ್ನಡ ಬರಲ್ಲ ಎಂದು ಹೇಳೋದಿಲ್ಲ. ಆದ್ರೀಗ ಮತ್ತೆ ಅನುಷ್ಕಾ ಶೆಟ್ಟಿ, ಕನ್ನಡದಿಂದಲೇ ಸುದ್ದಿಯಾಗಿದ್ದಾರೆ.

ತಾಯಿ ಜನ್ಮದಿನಕ್ಕೆ ಕನ್ನಡದಲ್ಲಿ ಶುಭಾಶಯ

ಹೌದು, ಇವತ್ತು ನಟಿ ಅನುಷ್ಕಾ ತಾಯಿ ಅವರ ಜನ್ಮದಿನ. ತನ್ನ ತಾಯಿಯ ಹುಟ್ಟುಹಬ್ಬಕ್ಕೆ ಫೇಸ್​ಬುಕ್​ನಲ್ಲಿ ವಿಶ್ ಮಾಡಿರುವ ಅನುಷ್ಕಾ, ಜನ್ಮದಿನದ ಹಾರ್ದಿಕ ಶುಭಾಶಯಗಳು ಅಮ್ಮಾ ಎಂದು ಕನ್ನಡದಲ್ಲೇ ಶುಭ ಕೋರಿದ್ದಾರೆ. ಅನುಷ್ಕಾ ಕನ್ನಡದಲ್ಲಿ ಶುಭ ಕೋರಿರುವುದಕ್ಕೆ ಅಭಿಮಾನಿಗಳು ಶಹಬ್ಬಾಸ್​ ಗಿರಿ ಕೊಟ್ಟಿದ್ದಾರೆ. ಕಳೆದ 10 ವರ್ಷಗಳಿಂದ ಚಿತ್ರರಂದಲ್ಲಿದ್ದರೂ, ನಂಬರ್ ಒನ್ ನಟಿಯಾಗಿದ್ದರೂ ಕನ್ನಡದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ. ನಿಮ್ಮ ಕನ್ನಡ ಪ್ರೀತಿಗೆ ಅಭಿನಂದನೆಗಳು ಎಂದು ಅಭಿಮಾನಿಗಳು ಕಾಮೆಂಟ್​ ಮಾಡ್ತಿದ್ದಾರೆ.

ಅನುಷ್ಕಾ ಕನ್ನಡ ಪ್ರೀತಿ.. ರಶ್ಮಿಕಾಗೆ ಸಂಕಷ್ಟ..!

Advertisement

ಇತ್ತೀಚೆಗಷ್ಟೇ ಕನ್ನಡ ಮಾತನಾಡಲು ಕಷ್ಟ ಆಗುತ್ತೆ ಎಂದು ಸಂದರ್ಶನವೊಂದರಲ್ಲಿ ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ರಶ್ಮಿಕಾ ಈಗ ಮತ್ತಷ್ಟು ಮುಜುಗರ ಅನುಭವಿಸಬೇಕಾಗಿದೆ. ಯಾಕಂದ್ರೆ, ಕನ್ನಡ ಸಿನಿಮಾದಲ್ಲಿ ನಟಿಸದೇ ಇದ್ರೂ, ಅನುಷ್ಕಾ ಮಾತ್ರ ಕನ್ನಡದಲ್ಲಿ ಶುಭ ಹಾರೈಸಿದ್ದಾರೆ. ಅಲ್ಲದೆ, ಈವರೆಗ ಎಲ್ಲೂ ಕೂಡ ಕನ್ನಡ ಬರುವುದಿಲ್ಲ ಎಂದು ಹೇಳಿಲ್ಲ. ಆದ್ರೆ, ರಶ್ಮಿಕಾ ಎರಡು ಮೂರು ವರ್ಷಗಳ ಸಿನಿಮಾ ಜರ್ನಿಯಲ್ಲೇ ಕನ್ನಡ ಬರುವುದಿಲ್ಲ ಎಂದಿರೋದು ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಚಿತ್ರರಂಗದ ಅಭಿಮಾನಿಗಳು ಅನುಷ್ಕಾ ಫೇಸ್​ಬುಕ್​ನಲ್ಲಿ ರಶ್ಮಿಕಾ ಮೇಲಿನ ಸಿಟ್ಟನ್ನೂ ತೀರಿಸಿಕೊಳ್ತಿದ್ದಾರೆ. ಅನುಷ್ಕಾ ಅವರನ್ನ ನೋಡಿ ರಶ್ಮಿಕಾ ಕಲಿಯಲಿ ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಅದೇನೇ ಆಗ್ಲಿ, ಅನುಷ್ಕಾ ಶೆಟ್ಟಿ ಕನ್ನಡ ಪ್ರೀತಿಗೆ ಹ್ಯಾಟ್ಸಾಫ್​ ಹೇಳಲೇಬೇಕು. ನಮ್ಮ ರೈಸಿಂಗ್ ಕನ್ನಡ ಕಡೆಯಿಂದಲೂ ಅನುಷ್ಕಾ ಶೆಟ್ಟಿಗೆ ಅಭಿನಂದನೆಗಳು.

https://www.facebook.com/AnushkaShetty/posts/10162347419035193?sfnsw=cl

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ