Featured
ಇನ್ನೂ 3-4 ದಿನ ರಾಜ್ಯದಲ್ಲಿ ಭಾರೀ ಮಳೆ : ಹಲವೆಡೆ ರೆಡ್ ಅಲರ್ಟ್ ಘೋಷಣೆ
![](https://risingkannada.com/wp-content/uploads/2019/08/karnataka-rains.jpg)
ಬೆಂಗಳೂರು : ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಜೋರಾಗಿದೆ. ಅದರಲ್ಲೂ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಭರ್ಜರಿ ಮಳೆ ಆಗ್ತಿದ್ದು, ಪ್ರವಾಹ ಉಂಟಾಗಿದೆ. ಇದೇ ರೀತಿ ಮತ್ತೆ ಮೂರು ದಿನ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆಗಸ್ಟ್ 7 ಅಂದ್ರೆ, ಇವತ್ತಿನಿಂದ ಆಗಸ್ಟ್ 9ರವರೆಗೆ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮೂರು ಅಥವಾ ನಾಲ್ಕು ದಿನಗಳಲ್ಲಿ ಬರೋಬ್ಬರಿ 200 ಮಿ.ಮೀ.ಗಿಂತಲೂ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ, ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಗೆ ರವಾನಿಸಲಾಗಿದೆ. ಮತ್ತೊಂದೆಡೆ ಇಷ್ಟು ದಿನ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಆಗ್ತಿದೆ. ಈ ಮೂರು ದಿನಗಳಲ್ಲಿ ದಕ್ಷಿಣ ಒಳನಾಡು ಅಂದ್ರೆ, ಬೆಂಗಳೂರು ಸುತ್ತಮುತ್ತ ಸೇರಿದಂತೆ ಮೈಸೂರು ಭಾಗದಲ್ಲಿ ಮಳೆ ಆಗುತ್ತೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಈಗೀಗ ಉತ್ತಮ ಮಳೆ ಆಗ್ತಿದ್ದು, ಮುಂಗಾರು ಕೊರತೆ ಪ್ರಮಾಣ ಕಡಿಮೆ ಆಗ್ತಿದೆ. ಈ ಮೂರು ದಿನಗಳಲ್ಲಿ ರಾಜ್ಯದ ಎಲ್ಲಡೆ ಮಳೆ ಆಗುತ್ತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?