Connect with us

ರಾಜಕೀಯ

ಕಾಂಗ್ರೆಸ್ ಗೆ ಟಿಕೆಟ್ ಕಗ್ಗಂಟು: ಪ್ರಚಾರ ಆರಂಭಿಸಿದ ಬಿಜೆಪಿ ಅಭ್ಯರ್ಥಿ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಎಸ್.ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕಗ್ಗಂಟು ಇನ್ನೂ ಬಗೆ ಹರಿದಿಲ್ಲ. ಈ ನಡುವೆ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಸಿಎಂ ತವರು ವಿಧಾನಸಭಾ ಕ್ಷೇತ್ರವನ್ನೊಳಗೊಂಡ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರವನ್ನು ಶತಾಯ ಗತಾಯ ‘ಕೈ’ವಶ ಮಾಡಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಪಕ್ಷ ಬಲಿಷ್ಠ ಅಭ್ಯರ್ಥಿಗಾಗಿ ಇನ್ನೂ ಹುಡುಕಾಟ ನಡೆಸುತ್ತಲೇ ಇದೆ.

ಮಾಜಿ ಸಂಸದ ಧೃವನಾರಾಯಣ್ ಅವರ ಅಕಾಲಿಕ ಮರಣದ ನಂತರ ಬಿಜೆಪಿಗೆ ಟಕ್ಕರ್ ಕೊಡಬಲ್ಲ ಅಭ್ಯರ್ಥಿಯ ಕೊರತೆಯು ಕೈಪಾಳಯದಲ್ಲಿದೆ. ಹೀಗಾಗಿ ಸ‌ಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಒತ್ತಡ ಹೇರುತ್ತಿದೆ. ಆದರೆ ತಾವು ಚುನಾವಣೆ ಅಖಾಡಕ್ಕಿಳಿಯಲು ಹಿಂದೇಟು ಹಾಕುತ್ತಿರುವ ಹೆಚ್.ಸಿ ಮಹದೇವಪ್ಪ ತಮ್ಮ ಪುತ್ರ ಸುನೀಲ್ ಬೋಸ್ ಗೆ ಟಿಕೆಟ್ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ಆದರೆ ಪೊಲೀಸ್ ಇಲಾಖೆ ಹಾಗೂ ಗುಪ್ತಚರ ಮೂಲಗಳ ವರದಿಯಂತೆ ಸುನೀಲ್ ಬೋಸ್ ಗೆಲುವು ಅಷ್ಟು ಸುಲಭವಾಗಿಲ್ಲ ಎಂಬುದನ್ನರಿತ ಕೈ ಪಾಳಯ ಸೂಕ್ತ ಅಭ್ಯರ್ಥಿಗಾಗಿ ಕಾದು ನೋಡುವ ತಂತ್ರ ಅನುಸರಿಸುತ್ತಿದೆ.

8

ಈಗಾಗಲೇ ಕಾಂಗ್ರೆಸ್ ನಲ್ಲಿ ಮಾಜಿ ಶಾಸಕ ನಂಜುಂಡಸ್ವಾಮಿ, ಮಾಜಿ ಸಂಸದ ದಿವಂಗತ ಧೃವನಾರಾಯಣ್ ಪುತ್ರ ದರ್ಶನ್ ಧೃವನಾರಾಯಣ್, ಹೆಚ್‌.ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಹೆಸರುಗಳು ರೇಸ್ ನಲ್ಲಿದ್ದರೂ ಇನ್ನೂ ಅಂತಿಮ ತೀರ್ಮಾನಕ್ಕೆ ಬರುವಲ್ಲಿ ಕಾಂಗ್ರೆಸ್ ಹಿಂದೆ ಬಿದ್ದಿದೆ. ಈ ನಡುವೆ ಬಿಜೆಪಿ ನಿಯೋಜಿತ ಅಭ್ಯರ್ಥಿ ಮಾಜಿ ಶಾಸಕ ಬಾಲರಾಜ್ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಶ್ರೀಗಳ ಆಶೀರ್ವಾದ ಪಡೆದು, ಜೆಡಿಎಸ್ ಶಾಸಕ ಎಂ.ಆರ್ ಮಂಜುನಾಥ್ ಅವರ ಹನೂರು ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಿಂದಲೇ ಅಧಿಕೃತವಾಗಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಜಯಗಳಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್ ವಯಸ್ಸು ಮತ್ತು ಅನಾರೋಗ್ಯದ ಕಾರಣದಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಅದೇ ಗೆಲುವಿನ ನಾಗಾಲೋಟ ಮುಂದುವರೆಸಲು ಬಾಲರಾಜ್ ಈಗಾಗಲೇ ತಮ್ಮ ರಾಜಕೀಯ ಗುರುಗಳಾದ ದಿ.ರಾಜಶೇಖರಮೂರ್ತಿ ಹಾಗೂ ದಿ.ಧೃವನಾರಾಯಣ್ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಲಿಂಗಾಯತ ಹಾಗೂ ಎಸ್.ಸಿ ಮತ ಬ್ಯಾಂಕ್ ಗೆ ಲಗ್ಗೆ ಇಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬಾಲರಾಜ್ ಪ್ರಚಾರ ಕಾರ್ಯದಲ್ಲಿ ಮಾಜಿ ಸಚಿವ ಎನ್ ಮಹೇಶ್ ಸೇರಿದಂತೆ ಹಲವು ಬಿಜೆಪಿ ಮುಖಂಡರು, ದಲಿತ ಸಮುದಾಯದ ಮುಖಂಡರು ಸಾಥ್ ನೀಡಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ