Featured
ಕಾಶ್ಮೀರ ಕ್ರಾಂತಿಗಾಗಿ ಇಡೀ ದೇಶದ ಜನತೆಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ
ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ 370 ವಿಧಿ ರದ್ದು ಮಾಡಿದ್ದರಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕನಸು ನನಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ದೇಶವನ್ನು ಉದ್ದೇಶಿ ಮಾತ್ನಾಡಿದ ಮೋದಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಆಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳಿಗೆ ಇಡೀ ದೇಶದ ಜನತೆಗೆ ಧನ್ಯವಾದ ಅರ್ಪಿಸಿದರು.
ನಾವು ಒಂದು ರಾಷ್ಟ್ರವಾಗಿ, ಒಂದು ಕುಟುಂಬವಾಗಿ ಐತಿಹಾಸಿಕ ನಿರ್ಧಾರವನ್ನ ತೆಗೆದುಕೊಂಡಿದ್ದೇವೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್ನ ಸಹೋದರರು, ಸಹೋದರಿಯರು ಹಲವು ಸೌಲಭ್ಯ, ಅಭಿವೃದ್ಧಿಯಿಂದ ವಂಚಿತರಾಗಿದ್ದರು. ಇವರೆಲ್ಲರ ಅಭಿವೃದ್ಧಿಗೆ 370ನೇ ವಿಧಿ ಅಡ್ಡಿಯಾಗಿತ್ತು. ಎಲ್ಲರ ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯ್ತು ಎಂದು ಪ್ರಧಾನಿ ಮೋದಿ ಹೇಳಿದರು.
ಇನ್ನು ಮುಂದೆ ಕೇಂದ್ರದ ಅನುದಾನ ಹೆಚ್ಚಾಗಲಿದೆ. ಇತರೆ ರಾಜ್ಯಗಳಂತೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಕೂಡ ಅಭಿವೃದ್ಧಿ ಆಗಲಿದೆ. ಇಲ್ಲಿನ ಹೆಣ್ಣು ಮಕ್ಕಳಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಿಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ರು. 370ನೇ ವಿಧಿ ರದ್ದು ಮಾಡಿರೋದ್ರಿಂದ ಸರ್ಕಾದ್ ಪಟೇಲ್, ವಾಜಪೇಯಿ, ಡಾ.ಅಂಬೇಡ್ಕರ್, ಶ್ಯಾಮ್ ಮುಖರ್ಜಿ ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳ ಕನಸು ನನಸಾಗಿದೆ ಎಂದು ಮೋದಿ ಹೇಳಿದರು.
ಇದೇ ವೇಳೆ ಮಾತ್ನಾಡಿದ ಮೋದಿ, ಇನ್ಮುಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತವಾಗಿ ಮತಚಲಾಯಿಸುವ ಹಕ್ಕು ದೊರೆಯಲಿದೆ ಎಂದು ಮೋದಿ ಭರವಸೆ ನೀಡಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?