Featured
ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಘಾತ

ರೈಸಿಂಗ್ ಕನ್ನಡ :- ಮ್ಯಾಜಿಕಲ್ ಮ್ಯೂಜಿಕ್ ಕಂಪೋಸರ್ ಅರ್ಜುನ್ ಜನ್ಯ ಅವರಿಗೆ ಹೃದಯಘಾತ ಸಂಭವಿಸಿದ್ದು , ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಅರ್ಜುನ್ ಜನ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿರುವಾಗ ಹೃದಯಘಾತ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಚಿಕಿತ್ಸೆಗೆ ಸಮೀಪವಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ.ತಡರಾತ್ರಿಯಿಂದಲೇ ಅರ್ಜುನ್ ಜನ್ಯ ಅವರಿಗೆ ಚಿಕಿತ್ಸೆ ಆರಂಬಿಸಿದ್ದು , ರಾತ್ರಿಯೇ ಆ್ಯಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಅರ್ಜುನ್ ಜನ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು , ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.
ಸ್ಟಾರ್ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಹಲವು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದಾರೆ. ಸಂಗೀತ ನಿರ್ದೇಶನದ ಜೊತೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಗುರುತಿಸಿಕೊಂಡಿದ್ದಾರೆ ಅರ್ಜುನ್ ಜನ್ಯ.
ಸಮಯ ಸಿಕ್ಕಾಗಲೆಲ್ಲ ಅರ್ಜುನ್ ಜನ್ಯ ಮೈಸೂರಿಗೆ ಬಂದು ಉಳಿದುಕೊಳ್ಲುತ್ತಿದ್ದರಂತೆ. ನಿನ್ನೆಯೂ ಮೈಸೂರಿನ ಬೋಗಾದಿ ರಸ್ತೆಯ ಬಳಿ ಇರುವ ಐಷಾರಾಮಿ ವಿಲ್ಲಾದಲ್ಲಿರುವಾಗಲೇ ಈ ಘಟನೆ ನಡೆದಿದೆ.
39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯನ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸಿನಿಮಾಗಳಿಗೆ ಸಂಗೀತ ನಿದೇಶನ ಮಾಡಿದ್ದಾರೆ. ಇತ್ತೀಚಿಗೆ ತೆರೆಕಂಡ ದರ್ಶನ್ ಅಭಿನಯದ ಓಡೆಯ ಸಿನಿಮಾಗೆ ಹಾಗೂ ಇನ್ನೇನು ತೆರೆ ಕಾಣಬೇಕಿರುವ ರಾಬರ್ಟ್ ಚಿತ್ರಕ್ಕೆ ಇವರೇ ಸಂಗೀತ ನಿರ್ದೇಶನ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?