TV ಸೀರಿಯಲ್
ಗಣೇಶ್ ಟ್ರಿಬಲ್ ರೈಡಿಂಗ್ ಬಳಿಕ ಡಾರ್ಲಿಂಗ್ ಕೃಷ್ಣಾ ಜೊತೆ ಮೇಘಾ ಶೆಟ್ಟಿ
ರೈಸಿಂಗ್ ಕನ್ನಡ :
ಗೋಲ್ಡನ್ ಸ್ಟಾರ್ ಗಣೇಶ್ ತ್ರಿಬಲ್ ರೈಡಿಂಗ್ ಸಿನಿಮಾ ಬಳಿಕ, ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ, ಡಾರ್ಲಿಂಗ್ ಕೃಷ್ಣ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 27ರಂದು ಸಿನಿಮಾದ ಟೈಟಲ್ ಲಾಂಚ್ ಆಗಲಿದೆ. ಡಾರ್ಲಿಂಗ್ ಕೃಷ್ಣಾ ಜೊತೆ ಜೊತೆಯಲಿ ಅಭಿನಯಿಸಲಿದ್ದಾರೆ ಮೇಘಾ ಶೆಟ್ಟಿ.
ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಇತ್ತೀಚೆಗಷ್ಟೇ ತ್ರಿಬಲ್ ರೈಡಿಂಗ್ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದರು. ಈ ವೇಳೆ ಮಾತನಾಡುವಾಗ ಹೊಸ ಸಿನಿಮಾ ಬಗ್ಗೆ ಶೀಘ್ರವೇ ಅಪ್ಡೇಟ್ ನೀಡುತ್ತೇನೆ ಎಂದಿದ್ದರು. ಇದೀಗ ಹೊಸ ಸಿನಿಮಾ ಸಂತಸವನ್ನ ಹಂಚಿಕೊಂಡಿರೋ ಅವರು, ಡಾರ್ಲಿಂಗ್ ಕೃಷ್ಣ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 27ರಂದು ಸಿನಿಮಾದ ಟೈಟಲ್ ಲಾಂಚ್ ಆಗಲಿದೆ.
ಲವ್ ಮಾಕ್ಟೇಲ್ ಸಿನಿಮಾ ನಿರ್ದೇಶಿಸಿ, ನಟಿಸಿದ್ದ ಡಾರ್ಲಿಂಗ್ ಕೃಷ್ಣ ಸ್ಯಾಂಡಲ್ವುಡ್ನ ಬೇಡಿಕೆಯ ನಟರಲ್ಲಿ ಒಬ್ಬರು. ಅವರು ಈಗ ಸಾಲುಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈಗ ಅವರು ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಮೇಘಾ ಶೆಟ್ಟಿ ಹಾಗೂ ನಿಶ್ವಿಕಾ ನಾಯ್ಡು ನಾಯಕಿಯರು. ಸೆಪ್ಟೆಂಬರ್ 27ರಂದು ದಕ್ಷ ಪೊಲೀಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಟೈಟಲ್ ಲಾಂಚ್ ಮಾಡಲಿದ್ದಾರೆ. ಪೊಲೀಸ್ ಅಧಿಕಾರಿ ಕೈಯಲ್ಲಿ ಟೈಟಲ್ ಲಾಂಚ್ ಮಾಡಿಸುತ್ತಿರುವುದರಿಂದ ಸಿನಿಮಾ ಕಥೆ ಪೊಲೀಸ್ ಕಥಾಹಂದರ ಹೊಂದಿರಲಿದೆಯೆ ಎನ್ನುವ ಕುತೂಹಲ ಮೂಡಿದೆ.
ಇದಕ್ಕೆ ಚಿತ್ರತಂಡವೇ ಉತ್ತರ ನೀಡಬೇಕಿದೆ. ಸುಮಂತ್ ಕ್ರಾಂತಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶಿವ ತೇಜಸ್ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ರವಿ ವರ್ಮಾ ಅವರ ಆ್ಯಕ್ಷನ್ ನಿರ್ದೇಶನ ಸಿನಿಮಾಗೆ ಇರಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?