Featured
ಡಿಕೆಶಿ ಪತ್ನಿ ಉಷಾ ಭೇಟಿಯಾದ ನಿರ್ಮಲಾನಂದ ಶ್ರೀ.! : ಒಕ್ಕಲಿಗ ಸಮುದಾಯದ ಹೋರಾಟದಲ್ಲಿ ಭಾಗಿ ಆಗ್ತಾರಾ.?
ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ, ಡಿಕೆ ಶಿವಕುಮಾರ್ ಬಂಧನಕ್ಕೆ ಒಕ್ಕಲಿಗ ಸಮುದಾಯ ತೀವ್ರ ಆಕ್ರೋಶವನ್ನ ವ್ಯಕ್ತಪಡಿಸಿದೆ. ಈ ಮಧ್ಯೆ, ಆದಿ ಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದ ಶ್ರೀಗಳು, ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರೋ ಡಿಕೆ ನಿವಾಸಕ್ಕೆ ಭೇಟಿ ನೀಡಿದ ನಿರ್ಮಲಾನಂದ ಶ್ರೀಗಳು, ಡಿಕೆಶಿ ಪತ್ನಿ ಉಷಾ ಅವರಿಗೆ ಧೈರ್ಯ ಹೇಳಿದ್ರು.
ನಿಮ್ಮೊಂದಿಗೆ ನಾವಿದ್ದೇವೆ. ಧೈರ್ಯ ಕಳೆದುಕೊಳ್ಳಬೇಡಿ. ಮುಂದಿನ ದಿನಗಳಲ್ಲಿ ಎಲ್ಲವೂ ಒಳ್ಳೆಯದ್ದೇ ಆಗುತ್ತೆ ಎಂದು ನಿರ್ಮಲಾನಂದ ಶ್ರೀಗಳು, ಡಿಕೆಶಿ ಪತ್ನಿ ಉಷಾ ಅವರಿಗೆ ಭರವಸೆ ನೀಡಿ, ಸ್ಥೈರ್ಯ ತುಂಬಿದ್ರು.
ಇನ್ನು, ಇದೇ ಬುಧವಾರ ಬೆಂಗಳೂರಿನಲ್ಲಿ ಒಕ್ಕಲಿಗರ ಸಮುದಾಯ ಪ್ರತಿಭಟನೆ ನಡೆಸಲಿದ್ದು, ವಿವಿಧ ಒಕ್ಕಲಿಗ ಸಂಘಟನೆಗಳು, ರಾಜಕಾರಣಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಡಿಕೆಶಿ ಬಂಧನದ ವಿರುದ್ಧ ಈ ಪ್ರತಿಭಟನೆ ನಡೆಯಲಿದ್ದು, ನಿರ್ಮಲಾನಂದ ಶ್ರೀಗಳು ಭಾಗಿ ಆಗ್ತಾರಾ ಇಲ್ವಾ ಅನ್ನೋದನ್ನ ಕಾದುನೋಡಬೇಕಿದೆ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?