Featured
ಡಿಕೆಶಿ ಬಂಧನಕ್ಕೆ ಒಕ್ಕಲಿಗರ ಪ್ರತಿಭಟನೆ : ಬೆಂಗಳೂರಿನಲ್ಲಿ ಟೈಟ್ ಸೆಕ್ಯೂರಿಟಿ

ಬೆಂಗಳೂರು : ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರ ಸಂಘಟನೆಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ರ್ಯಾಲಿ ನಡೆಸ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಫುಲ್ ಸೆಕ್ಯೂರಿಟಿ ನೀಡಲಾಗಿದೆ. ಹೆಚ್ಚುವರಿ ಭದ್ರತೆ ಒದಗಿಸಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಅಲ್ಲದೆ, ಪ್ರತಿಭಟನಾಕಾರರಿಗೆ ಕೆಲವು ಷರತ್ತು ವಿಧಿಸಿರೋದಾಗಿ ಬೆಂಗಳೂರು ಕಮೀಷನರ್ ಭಾಸ್ಕರ್ ರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಕಮೀಷನರ್ ಭಾಸ್ಕರ್ ರಾವ್, ಸಾರ್ವಜನಿಕರಿಗೆ ತೊಂದರೆ ನೀಡದಂತೆ ಪ್ರತಿಭಟನಾಕಾರರಿಗೆ ಸೂಚನೆ ನೀಡಿದ್ದೇವೆ. 50 ಕೆಎಸ್ಆರ್ಪಿ ತುಕಡಿ, 11 ಡಿಸಿಪಿ, 42 ಎಸಿಪಿ, 106 ಇನ್ಸ್ಪೆಕ್ಟರ್ ಸೇರಿದಂತೆ 2500 ಮಂದಿ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲಾಗಿದೆ. ಮಫ್ತಿಯಲ್ಲೂ ಪೊಲೀಸರು ಇರಲಿದ್ದು, ಸುತ್ತಮುತ್ತಲಿನ ಜಿಲ್ಲೆಗಳಿಂದಲೂ ಸಿಬ್ಬಂದಿಯನ್ನ ಕರೆಸಿಕೊಳ್ಳಲಾಗಿದೆ ಎಂದು ಭಾಸ್ಕರ್ ರಾವ್ ಮಾಹಿತಿ ನೀಡಿದ್ರು.
ಇನ್ನು, ಪ್ರತಿಭಟನೆ ಹಾಗೂ ಸಮಾರಂಭದಲ್ಲಿ ಪಟಾಕಿ ಹೊಡೆಯುವುದು, ಯಾವುದೇ ವಸ್ತುಗಳನ್ನ ಸುಡುವುದನ್ನು ನಿಷೇಧಿಸಲಾಗಿದೆ. ಕಾನೂನಿಗೆ ಭಂಗ ತರುವಂತ ಯಾವುದೇ ಕೆಲಸಗಳು ಮಾಡುವಂತಿಲ್ಲ ಎಂದು ಷರತ್ತು ವಿಧಿಸಿರೋದಾಗಿ ಕಮೀಷರನ್ ಭಾಸ್ಕರ್ ರಾವ್ ಹೇಳಿದ್ರು.
ಅದೇನೇ, ಇರಲಿ ಬೆಂಗಳೂರಿನಲ್ಲಿ ನಾಳೆ ಬಹುಶಃ ಭಾಗಶಃ ಬಂದ್ ವಾತಾವರಣ ಇರಬಹುದು. ಬೆಂಗಳೂರಿಗರು ಸೇರಿದಂತೆ, ಹೊರಗಿನವರು ಬೆಂಗಳೂರಿಗೆ ಬಂದ್ರೆ ಹುಷಾರಾಗಿರಿ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?