Featured
ಡಿಕೆಶಿ ಬಂಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ..! ಹೆಚ್ಡಿಕೆ ಹೇಳಿದ್ದೇನು..?
![](https://risingkannada.com/wp-content/uploads/2019/09/dhk-dkshi.jpeg)
ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನಕ್ಕೆ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಈ ಮಧ್ಯೆ, ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕೂಡ ಬಿಜೆಪಿ ಹಾಗೂ ಇಡಿ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರೋದು ದೃಢಪಟ್ಟಿದೆ ಎಂದು ಹೆಚ್ಡಿಕೆ ಟ್ವಿಟ್ಟರ್ನಲ್ಲಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಬೆಂಬಲಕ್ಕೆ ಹೆಚ್ಡಿಕೆ ನಿಂತಿದ್ದಾರೆ. ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ.ಹಬ್ಬದ ಆಚರಣೆಗೂ ಅವಕಾಶ ನೀಡದೆ 4ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ @DKShivakumar ರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ.
ಟ್ವಿಟ್ಟರ್ನಲ್ಲಿ ಈ ವಿಚಾರವನ್ನ ಹೊರ ಹಾಕಿರೋ ಹೆಚ್ಡಿಕೆ, ಹಬ್ಬದ ಆಚರಣೆಗೂ ಅವಕಾಶ ನೀಡದೆ, ಕಳೆದ 4 ದಿನಗಳಿಂದ ನಿರಂತರವಾಗಿ ಡಿಕೆಶಿ ಅವರನ್ನ ವಿಚಾರಣೆಗೆ ಒಳಪಡಿಸಲಾಗಿದೆ. ಆದರೂ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬುದು ಕೇವಲ ನೆಪವಷ್ಟೇ. ಇದು ಪ್ರಜಾಪ್ರಭುತ್ವದ ಕೊಲೆ ಎಂದು ಹೆಚ್ಡಿಕೆ ತಮ್ಮ ಅಸಮಾಧಾನವನ್ನ ಹೊರ ಹಾಕಿದ್ದಾರೆ. After days of interrogation, without allowing even a day's break for the festival, ED now cites non-cooperation to arrest @DKShivakumar. The ruling govt is using investigation agencies to oppress those opposition leaders who they think are a threat to their interests.— H D Kumaraswamy (@hd_kumaraswamy) September 3, 2019
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?