Featured
ಡಿಕೆಶಿ ಬಂಧನಕ್ಕೆ ರಾಜ್ಯಾದ್ಯಂತ ಕಾಂಗ್ರೆಸ್ ಆಕ್ರೋಶ : ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ, ಬಸ್ ಇರುತ್ತಾ..? ಇರಲ್ವಾ..? ಬಂದ್ ಆಗುತ್ತಾ..?
ಬೆಂಗಳೂರು/ನವದೆಹಲಿ : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನಕ್ಕೆ ಕರ್ನಾಟಕ ಮಾತ್ರವಲ್ಲದೇ ಇಡೀ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಡಿಕೆಶಿ ಅರೆಸ್ಟ್ ಆಗ್ತಿದ್ದಂತೆ ಅಲ್ಲೇ ಬೆಂಬಲಿಗರು ಪ್ರತಿಭಟನೆ ನಡೆಸಿದ್ರು. ಇಡಿ ಅಧಿಕಾರಿಗಳು, ದೆಹಲಿ ಪೊಲೀಸರಿಗೆ ಅಡ್ಡಬಂದು, ಡಿಕೆಶಿ ಕಾರಿಗೂ ಅಡ್ಡಲಾಗಿದ್ರು. ಕೊನೆಗೆ ಎಲ್ಲರನ್ನ ದೆಹಲಿ ಪೊಲೀಸರು ಚದುರಿಸಿದ್ರು.
ದೆಹಲಿಯಲ್ಲಿ ಡಿಕೆಶಿ ಅರೆಸ್ಟ್ ಆಗ್ತಿದ್ದಂತೆ ಇತ್ತ ಕನಕಪುರದಲ್ಲಿ ಈಗಾಗಲೇ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ರಾಮನಗರ, ಮಂಡ್ಯ, ಹಾಸನ, ಮೈಸೂರು ವಿಶೇಷ ಎನ್ನುವಂತೆ ಕೊಡಗಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರು ರಾತ್ರೋ ರಾತ್ರಿ ಬೀದಿಗಿಳಿದು ಆಕ್ರೋಶ ಹೊರಹಾಕಿದ್ರು. ಇತ್ತ ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ರು.
ಈಗಾಗಲೇ ಹಲವೆಡೆ ಟೈರ್ಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರೆ, ಹಲವೆಡೆ ಬಸ್ಗಳಿಗೆ ಕಲ್ಲು ತೂರಾಟವೂ ನಡೆದಿದೆ. ಇತ್ತ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ ಸೇರಿದಂತೆ ಹಲವುಡೆ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ಕರೆ ನೀಡಿದ್ದಾರೆ.
ರಾತ್ರಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಜೋರಾಗ್ತಿದ್ದಂತೆ, ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ನಾಳೆ ಅಂದ್ರೆ, ಬುಧವಾರ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ನಾವೆಲ್ಲಾ ಡಿಕೆಶಿ ಜೊತೆ ಇದ್ದೇವೆ ಅಂತ ಹೇಳಿದ್ರು.
ಅಂದ್ರೆ, ನಾಳೆ ಬುಧವಾರ ಇಡೀ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಲಿದೆ. ಬಹುತೇಕ ಬಂದ್ ವಾತಾವರಣ ಇರೋ ಸಾಧ್ಯತೆ ಇದ್ದು, ಬಸ್ಗಳು ರೋಡಿಗೆ ಇಳಿಯೋದು ಡೌಟು ಅನ್ನೋ ಮಾತು ಕೇಳಿ ಬರ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?