ನವದೆಹಲಿ : ಕಳೆದ ನಾಲ್ಕು ದಿನಗಳಿಂದ ಇಡಿ ವಿಚಾರಣೆಯಲ್ಲಿದ್ದ ಮಾಜಿ ಸಚಿವ, ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರನ್ನ ಜಾರಿ ನಿರ್ದೇಶನಾಲಯ ಕೊನೆಗೂ ಇವತ್ತು ರಾತ್ರಿ 8 ಗಂಟೆ ಸುಮಾರಿಗೆ ಬಂಧಿಸಿದೆ. ಈ ಕುರಿತು ಸುದ್ದಿ ಸಂಸ್ಥೆ ಐಎನ್ಎಸ್ ಟ್ವೀಟ್ ಮಾಡಿದ್ದು, ಡಿಕೆಶಿ ಬಂಧನ ವಿಚಾರವನ್ನ ದೃಢಪಡಿಸಿದೆ.
ದೆಹಲಿಯ ಫ್ಲಾಟ್ನಲ್ಲಿ ಹಣ ಸಿಕ್ಕ ಪ್ರಕರಣದಲ್ಲಿ ಡಿಕೆಶಿ ಬಂಧನವಾಗಿದೆ. ಇಡಿ ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಡಿಕೆಶಿ ಅವರನ್ನ ಬಂಧಿಸಿರೋದಾಗಿ ಇಡಿ ಸ್ಪಷ್ಟನೆ ನೀಡಿದೆ. ಡಿಕೆ ಶಿವಕುಮಾರ್ ಅವರನ್ನ ಬಂಧಿಸಿರೋ ಇಡಿ ಅಧಿಕಾರಿಗಳು, ದೆಹಲಿ ಪೊಲೀಸರ ಸಹಕಾರದೊಂದಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಆರ್ಎಂಎಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ಬಳಿಕ ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
ದೆಹಲಿಯ ಡಿಕೆಶಿ ಫ್ಲಾಟ್ನಲ್ಲಿ 8.59 ಕೋಟಿ ಹಣ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಇಡಿ, ಡಿಕೆಶಿಗೆ ಸಮನ್ಸ್ ಜಾರಿ ಮಾಡಿತ್ತು. ಅದರಂತೆ ಕಳೆದ ನಾಲ್ಕು ದಿನಗಳಿಂದ ಡಿಕೆಶಿ ವಿಚಾರಣೆ ನಡೀತಿತ್ತು. ಕೊನೆಗೆ ಇವತ್ತು ದೆಹಲಿಯ ಲೋಕನಾಯಕ ಭವನದಲ್ಲಿರೋ ಇಡಿ ಕಚೇರಿಯಲ್ಲಿ ಬಂಧಿಸಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?