Connect with us

Featured

ಡಿಕೆ ಶಿವಕುಮಾರ್‌ ವಿಚಾರಣೆ ನಾಳೆಗೆ ಮುಂದೂಡಿಕೆ, ನ್ಯಾಯಾಂಗ ಬಂಧನದಲ್ಲಿ ಡಿಕೆಶಿ, ವಾದ-ಪ್ರತಿವಾದ ಹೀಗಿದೆ ಓದಿ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದ ಡಿಕೆ ಶಿವಕುಮಾರ್‌ರನ್ನ ಇಂದು ರೋಸ್‌ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಲಾಯಿತು, ಡಿಕೆ ಶಿವಕುಮಾರ್‌ಗೆ ಬೇಲ್‌ ನೀಡಬೇಕಾ ಬೇಡ್ವಾ ಎಂಬ ವಾದ ಪ್ರತಿವಾದ ನಂತರ ನ್ಯಾಯಮೂರ್ತಿ ಅಜಯ್‌ ಕುಮಾರ್‌ ಕುಹರ್‌ ಡಿಕೆಶಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿದರು. ಅದಕ್ಕೂ ಮೊದಲು ಡಿಕೆಶಿ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದರು.

ಡಿಕೆ ಶಿವಕುಮಾರ್‌ ರ ಆರೋಗ್ಯ ತಪಾಸಣೆ ಮಾಡುತ್ತಿರುವ ಆರೋಗ್ಯಾಧಿಕಾರಿಗಳ ನಿರ್ಧಾರದ ಮೇಲೆ ಇವತ್ತು ಜೈಲಿಗೆ ಕಳುಹಿಸಬೇಕಾ ಬೇಡ್ವಾ ಎಂಬುದು ತೀರ್ಮಾನವಾಗಲಿದೆ. ಇನ್ನು ಡಿಕೆ ಶಿವಕುಮಾರ್‌ ಜಾಮೀನು ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ನಾಳೆ ಜಾಮೀನು ಸಿಕ್ಕರೆ ಮಾತ್ರ ಡಿಕೆಶಿಗೆ ರಿಲೀಫ್‌ ಇಲ್ಲವಾದರೆ ನ್ಯಾಯಾಂಗ ಬಂಧನ ಮುಂದುವರಿಯಲಿದೆ.

ಇಂದು ಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದಗಳ ಸಂಕ್ಷಿಪ್ತ ವಿವರ ಹೀಗಿದೆ…,

ಡಿಕೆಶಿ ಪರ ವಾದ ಮಂಡಿಸಿದ ಅಭಿಷೇಕ್‌ ಮನು ಸಿಂಘ್ವಿ, ಡಿಕೆಶಿ ಆರೋಗ್ಯದಲ್ಲಿ ಏರುಪೇರಾಗಿದೆ, ಅಧಿಕಾರಿಗಳ ವಾದದಲ್ಲಿ ಸತ್ಯಾಂಶವಿಲ್ಲ, ಇ.ಡಿ ಒಂದು ಪೂರ್ವಾಗ್ರಹಪೀಡಿತ ಸಂಸ್ಥೆಯಾಗಿದೆ, ಡಿಕೆಶಿ ಚುನಾವಣಾ ಆಯೋಗಕ್ಕೆ ಅಫಿಡವಿಟ್‌ ಸಿಲ್ಲಿಸಿದ್ದಾರೆ, ಡಿಕೆಶಿ ತಂದೆ ಮೃತರಾದ ಬಳಿಕ ಪಿತ್ರಾರ್ಜಿತ ಆಸ್ತಿಯೂ ಬಂದಿದೆ, ವಿನಾಃ ಕಾರಣ ಕಸ್ಟಡಿಯಲ್ಲಿಟ್ಟುಕೊಳ್ಳಲಾಗಿದೆ ಎಂದು ನ್ಯಾಯಮೂರ್ತಿಗಳಿಗೆ ಮನವಿ ಮಾಡಿದರು.

Advertisement

ಡಿಕೆಶಿ ಪರ ಮುಕುಲ್‌ ರೋಹಟಗಿ ಕೂಡ ವಾದ ಮಂಡಿಸಿ, ಡಿಕೆಶಿ ಏಳು ಬಾರಿ ಶಾಸಕರಾಗಿದ್ದಾರೆ, ಪಬ್ಲಿಕ್‌ ಫಿಗರ್‌ ಕೂಡ ಹೌದು. ಡಿಕೆಶಿ ಮನೆಯಲ್ಲಿ ಸಿಕ್ಕ ೪೧ ಲಕ್ಷ ತಮ್ಮದೆಂದು ಹೇಳಿಕೊಂಡಿದ್ದಾರೆ, ದೆಹಲಿಯಲ್ಲಿ ಸಿಕ್ಕ ಹಣಕ್ಕೆ ಅವರು ಜವಾಬ್ದಾರರಲ್ಲ, ಐಟಿ ದಾಳಿ ನಡೆದು ಎರಡು ವರ್ಷಗಳಾಗಿವೆ, ಡಿಕೆಶಿ ಪಾಸ್‌ಪೋರ್ಟ್‌ ಬೇಕಾದರೂ ಜಪ್ತಿ ಮಾಡಿ ಆದರೆ ಅವರಿಗೆ ಷರತ್ತುಬದ್ಧ ಜಾಮೀನು ನೀಡಿ ಎಂದು ಕೇಳಿಕೊಂಡರು.

ಜಾರಿ ನಿರ್ದೇಶನಾಲಯದ ಪರ ವಕೀಲರು ಪ್ರತಿವಾದ ಮಂಡಿಸಿ, ಡಿಕೆ ಶಿವಕುಮಾರ್‌ಗೆ ಅಗತ್ಯ ಚಿಕಿತ್ಸೆ ನೀಡಿದ್ದೇವೆ, ಕಸ್ಟಡಿ ವೇಳೆ ಆರೋಗ್ಯ ತಪಾಸಣೆ ನಡೆಸಿದ್ದೇವೆ, ಡಿಕೆಶಿ ಪ್ರಭಾವಿ ವ್ಯಕ್ತಿ, ಸಾಕ್ಷ್ಯ ನಾಶ ಸಾಧ್ಯತೆ ಇದೆ, ಡಿಕೆಶಿಗೆ ನ್ಯಾಯಾಂಗ ಬಂಧನ ಅನಿವಾರ್ಯ ಎಂದು ಕೇಳಿಕೊಂಡರು.

ವಾದ ಹಾಗೂ ಪ್ರತಿವಾದಗಳನ್ನ ಆಲಿಸಿದ ಮೇಲೆ ನ್ಯಾಯಮೂರ್ತಿಗಳು, ಆರೋಪಿಗಳೆಲ್ಲಾ ಸೇರಿಕೊಂಡು ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ, ಡಿಕೆಶಿ ಲೆಕ್ಕವಿಲ್ಲದ ೧೪೩ ಕೋಟಿ ರೂಪಾಯಿ ವ್ಯವಹಾರ ಮಾಡಿದ್ದಾರೆ, ಹಣಕ್ಕೆ ಅಗತ್ಯ ದಾಖಲೆ ಒದಗಿಸಿಲ್ಲ ಹಾಗಾಗಿ ನ್ಯಾಯಾಂಗ ಬಂಧನ ಮುಂದುವರಿಯಲಿ ನಾಳೆ ವಿಚಾರಣೆ ನಡೆಸೋದಾಗಿ ಹೇಳಿದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ