Featured
ದರ್ಶನ್ ಒಡೆಯ ಟೀಸರ್ ಬಿಡುಗಡೆಗೆ ಕ್ಷಣಗಣನೆ : ಡಿಬಾಸ್ ಅಭಿಮಾನಿಗಳಲ್ಲಿ ಹೆಚ್ಚಿದ ಕಾತರ
ರೈಸಿಂಗ್ ಕನ್ನಡ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಒಡೆಯ ಟೀಸರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ಬಗ್ಗೆ 9 ಗಂಟೆ 55 ನಿಮಿಷಕ್ಕೆ ಒಡೆಯ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ದರ್ಶನ್ ಒಡೆಯ ಸಿನಿಮಾದ ಟೀಸರ್ ರಿಲೀಸ್ ಆಗ್ತಿದೆ.
ಕುರುಕ್ಷೇತ್ರ ಸಿನಿಮಾ ಬಳಿಕ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಒಡೆಯ. ಎಂ.ಡಿ. ಶ್ರೀಧರ್ ನಿರ್ದೇಶನ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಂದೇಶ್ ನಾಗರಾಜ್ ನಿರ್ಮಾಪಕರು. ತಮಿಳಿನ ವೀರಂ ಸಿನಿಮಾದ ರಿಮೇಕ್ ಆಗಿದ್ರೂ, ದರ್ಶನ್ ನಾಯಕ ನಟನಾಗಿ ಇರೋದ್ರಿಂದ ಕನ್ನಡದ ನೇಟಿವಿಟಿಗೆ ತಕ್ಕಂತೆ ಸಿನಿಮಾ ಮಾಡಲಾಗಿದೆ. ದರ್ಶನ್ ಪಕ್ಕಾ ಮಾಸ್ ರೋಲ್ನಲ್ಲಿ ಕಾಣಸಿಕೊಂಡಿದ್ದಾರೆ.
ವಿಶೇಷ ಅಂದ್ರೆ, ದರ್ಶನ್ ಇಲ್ಲಿ ಅಣ್ಣನ ರೋಲ್ ಮಾಡಿದ್ದಾರೆ. ದರ್ಶನ್ಗೆ ಐವರು ತಮ್ಮಂದಿರು ಸಿನಿಮಾದಲ್ಲಿದ್ದು, ಮಾಸ್ ಜೊತೆಗೆ ಪಕ್ಕಾ ಫ್ಯಾಮಿಲಿ ಸಿನಿಮಾ ಇದಾಗಿದೆ. ಈಗಾಗಲೇ ಹಲವು ಪೋಸ್ಟರ್ಗಳು ಬಿಡುಗಡೆ ಆಗಿದ್ದು, ದರ್ಶನ್ ಲುಕ್ ಅಭಿಮಾನಿಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಏನಿದ್ರೂ, ಟೀಸರ್ ನೋಡಲು ಕಾತರರಾಗಿದ್ದಾರೆ. ಆಲ್ ದಿ ಬೆಸ್ಟ್ ಟು ಡಿ ಬಾಸ್.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?