Featured
ನಿಜಕ್ಕೂ ಫೋನ್ ಕದ್ದಾಲಿಕೆ ಆಗಿದೆಯಾ..? : ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?
ಬೆಂಗಳೂರು : ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿರೋ ಸುದ್ದಿ ಅಂದ್ರೆ, ಅದು ಫೋನ್ ಟ್ಯಾಪಿಂಗ್. ಒಂದೆಡೆ ಇಡೀ ರಾಜ್ಯ ಪ್ರವಾಹದಿಂದ ತತ್ತರಿಸಿದ್ರೆ, ಇತ್ತ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ಜಟಾಪಟಿ ನಡೀತಿದೆ.
ನನ್ನದೂ ಸೇರಿದಂತೆ ಅನರ್ಹ ಶಾಸಕರು, ವಿವಿಧ ರಾಜಕೀಯ ಗಣ್ಯರ ಫೋನ್ ಕದ್ದಾಲಿಕೆ ಆಗಿದೆ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮಾಡಿದ್ದ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಹುದ್ದೆ ಹಾಗೂ ಅಧಿಕಾರ ಶಾಶ್ವತ ಅಲ್ಲ ಎಂದು ಪದೇ ಪದೇ ಹೇಳಿದವನು ನಾನು. ಈ ಕುರ್ಚಿಗಾಗಿ ಫೋನ್ ಕದ್ದಾಲಿಕೆ ಮಾಡಿ, ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗೆ ಇರಲಿಲ್ಲ ಎಂದು ಕುಮಾರಸ್ವಾಮಿ ಟ್ವಿಟ್ಟರ್ನಲ್ಲಿ ಹೇಳಿದ್ದಾರೆ.
ಫೋನ್ ಕದ್ದಾಲಿಕೆ ವಿಚಾರದಲ್ಲಿ ನನ್ನ ಮೇಲಿನ ಆರೋಪ ಸುಳ್ಳು, ಆಧಾರರಹಿತ, ಸತ್ಯಕ್ಕೆ ದೂರವಾದದ್ದು ಎಂದು ಕುಮಾರಸ್ವಾಮಿ ತಮ್ಮ ಮೇಲಿನ ಆರೋಪವನ್ನ ತಳ್ಳಿಹಾಕಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಪತ್ರಕರ್ತರು, ರಾಜಕಾರಣಿಗಳು, ಪ್ರತಿಪಕ್ಷ ನಾಯಕರು ಸೇರಿದಂತೆ ಕೆಲವು ಹಿರಿಯ ಅಧಿಕಾರಿಗಳ ಫೋನ್ ಕದ್ದಾಲಿಕೆ ಆಗಿತ್ತು ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಆರೋಪ ಮಾಡಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?