Connect with us

Featured

ಪ್ರವಾಹದಿಂದ ಹತ್ತು ಸಾವಿರ ಕೋಟಿ ಹಾನಿ : ತುರ್ತು 3 ಸಾವಿರ ಕೋಟಿ ಬಿಡುಗಡೆ ಮಾಡಿ – ಕೇಂದ್ರಕ್ಕೆ BSY ಮನವಿ

ಬೆಳಗಾವಿ : ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹತ್ತು ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಆದ್ದರಿಂದ ತಕ್ಷಣವೇ 3 ಸಾವಿರ ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಯಡಿಯೂರಪ್ಪಪ ಮನವಿ ಮಾಡಿದ್ದಾರೆ.

Advertisement

ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಯಲ್ಲಿ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಈ ವಿಷಯ ತಿಳಿಸಿದರು.

ಹತ್ತು ಸಾವಿರ ಕೋಟಿ ಹಾನಿಯು ಪ್ರಾಥಮಿಕ ಅಂದಾಜು ಮಾತ್ರವಾಗಿದ್ದು, ಪ್ರವಾಹ ಸ್ಥಿತಿಯನ್ನು ನೋಡಿದರೆ ಅಂದಾಜು 30 ರಿಂದ 40 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ ಎಂಬುದು ನನ್ನ ಅಭಿಪ್ರಾಯ. ಸಮಗ್ರ ಸಮೀಕ್ಷೆ ಬಳಿಕ ಇದು ಗೊತ್ತಾಗಲಿದೆ ಎಂದು ಯಡಿಯೂರಪ್ಪ ತಿಳಿಸಿದ್ರು.

ಜನ-ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸುವುದು ಮತ್ತು ಜನರಿಗೆ ಪರಿಹಾರ ತಲುಪಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಇದರಲ್ಲಿ ಯಾವುದೇ ರಾಜೀಯಿಲ್ಲ ಎಂದರು.

ಬೆಳೆಹಾನಿಯಿಂದ ತತ್ತರಿಸಿರುವ ರೈತರು, ಮನೆಗಳನ್ನು ಕಳೆದುಕೊಂಡಿರುವ ಜನರು ಆತಂಕ ಪಡಬೇಕಿಲ್ಲ. ಸರ್ಕಾರ ಅವರ ಜತೆಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಪರಿಹಾರ ಒದಗಿಸುವುದು ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ.

ವೈಮಾನಿಕ ಸಮೀಕ್ಷೆ

Advertisement

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾಯುಸೇನೆಯ ಹೆಲಿಕಾಪ್ಟರ್ ನಲ್ಲಿ ಎರಡು ಗಂಟೆ ಹತ್ತು ನಿಮಿಷಗಳ ಕಾಲ ಪ್ರವಾಹ ಬಾಧಿತ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕೆಲ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಅವರು, ವಿಜಯಪುರದ ಆಲಮಟ್ಟಿ ಜಲಾಶಯದಿಂದ ಮಹಾರಾಷ್ಟ್ರದ ಕೊಯ್ನಾ ಜಲಾಶಯ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ನದಿಗಳನ್ನು ವೀಕ್ಷಿಸಿದರು.

2005 ರಲ್ಲಿ ಇದೇ ರೀತಿ ಪರಿಸ್ಥಿತಿ ಎದುರಾದಾಗ ನೆರವಿನ ಮಹಾಪೂರ ಹರಿದುಬಂದಿತ್ತು. ಈಗಲೂ ಕೈಗಾರಿಕೋದ್ಯಮಿಗಳು ಕೈಜೋಡಿಸಿದರೆ ಸಂತ್ರಸ್ತರ ಪುನರ್ವಸತಿ ಸುಲಭವಾಗಲಿದೆ ಎಂದರು.

ನಾಳೆಯಿಂದ ಮತ್ತೆ ಪ್ರವಾಸ: ಪ್ರವಾಹ ಬಾಧಿತ ಐದಾರು ಜಿಲ್ಲೆಗಳಲ್ಲಿ ನಾಳೆಯಿಂದ ಪ್ರವಾಸ ಕೈಗೊಂಡು ಸಂತ್ರಸ್ತರ ಅಹವಾಲು ಆಲಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ರು. ಸಮಗ್ರ ಸಮೀಕ್ಷೆಯ ವರದಿ ಬಂದ ಬಳಿಕ ಹೆಚ್ಚಿನ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

Advertisement

ಈ ವೇಳೆ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಅಭಯ್ ಪಾಟೀಲ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾದೇಪ್ಪ ಯಾದವಾಡ, ರಾಜ್ಯಸಭಾ ಸದಸ್ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.


ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ