Featured
ಪ್ರವಾಹ ಪೀಡಿತ ಜಿಲ್ಲೆಗಳಿಗೆ CM ಹಣ ಬಿಡುಗಡೆ : ತುರ್ತು ಕಾಮಗಾರಿಗೆ ಯಡಿಯೂರಪ್ಪ ಸೂಚನೆ
![](https://risingkannada.com/wp-content/uploads/2019/08/karnataka-cm-flood.jpg)
ಬೆಂಗಳೂರು : ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಸೇತುವೆಗಳು, ರಸ್ತೆಗಳು, ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ಗಳು ಸೇರಿದಂತೆ ಪ್ರತಿಯೊಂದು ವ್ಯವಸ್ಥೆ ಈಗ ಸ್ತಬ್ಧವಾಗಿವೆ. ಈ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ನಡೆಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ತುರ್ತು ಕಾಮಗಾರಿಗಳಿಗೆ 100 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಸೂಕ್ತ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ.
ಸದ್ಯ ಎರಡು ದಿನಗಳಿಂದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರೋ ಸಿಎಂ ಬಿ.ಎಸ್. ಯಡಿಯೂರಪ್ಪ ತಾವೇ ಕುದ್ದಾಗಿ ಪರಿಸ್ಥಿತಿಯನ್ನು ಅವಲೋಕನ ಮಾಡ್ತಿದ್ದಾರೆ. ಹೀಗಾಗಿ, ತುರ್ತು ಆಗಬೇಕಾದ ಕೆಲಸಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 100 ಕೋಟಿ ರೂಪಾಯಿ ಬಿಡುಗಡೆ ಮಾಡಿ, ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಆಗಿರೋ ಹಾನಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಎರಡು ಮೂರು ದಿನ ಪ್ರವಾಹ ಪೀಡಿತ ಪ್ರದೇಶಗಳಲ್ಲೇ ಸಿಎಂ ಯಡಿಯೂರಪ್ಪ ಇರಲಿದ್ದಾರೆ. ಯಡಿಯೂರಪ್ಪ ಜೊತೆ ಇನ್ನೂ ಯಾವುದೇ ಸಂಪುಟ ಸದಸ್ಯರು ಇಲ್ಲದೇ ಇರುವ ಕಾರಣ, ಒಬ್ಬರೇ ಎಲ್ಲಾ ಕಡೆ ಸುತ್ತಾಟ ನಡೆಸ್ತಿದ್ದಾರೆ.
for more News Updates Please visit : www.risingkannada.com
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?