Featured
ಬೆಂಗಳೂರಲ್ಲಿ ಹೈ-ಅಲರ್ಟ್ : ಉಗ್ರರಿಂದ ಬಾಂಬ್ ದಾಳಿ ಭೀತಿ..!

ಬೆಂಗಳೂರು : ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಜನ ಸಾಂದ್ರತೆ ಹೆಚ್ಚಿರೋ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ವಹಿಸಬೇಕಾದ ಕಟ್ಟೆಚ್ಚರಗಳ ಕುರಿತು ಎಲ್ಲಾ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನೆ ಆಗಿದೆ. ಬೆಂಗಳೂರಿನ ವಿವಿಧೆಡೆ ಚೆಕ್ಪೋಸ್ಟ್ ಹಾಕಲಾಗಿದೆ. ಮಾಲ್, ಮಾರುಕಟ್ಟೆ, ಪ್ರಮುಖ ಸರ್ಕಲ್ಗಳು, ಚಿತ್ರಮಂದಿರಗಳು, ಫೈವ್ ಸ್ಟಾರ್ ಹೊಟೇಲ್ಗಳು, ಬೆಂಗಳೂರು ಮೆಟ್ರೋ, ವಿಧಾನಸೌಧ, ವಿಕಾಸಸೌಧ, KSRTC, BMTC ಬಸ್ ಸ್ಟೇಷನ್, ಶಾಲಾ-ಕಾಲೇಜುಗಳು, ಜನ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಬೆಂಗಳೂರು ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ.
ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕೆಲಸ ಮಾಡ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಪಿಜಿ ಹಾಸ್ಟೆಲ್ಸ್, ಅಪಾರ್ಟ್ಮೆಂಟ್ಗಳು, ಧಾರ್ಮಿಕ ಕೇಂದ್ರಗಳ ಸುತ್ತಮುತ್ತ ಭದ್ರತೆ ಪರಿಶೀಲನೆ ಮಾಡುವಂತೆ ಆದೇಶಿಸಲಾಗಿದೆ. ಪೊಲೀಸ್ ಕಮೀಷನರ್ ಆದೇಶದ ಹಿನ್ನೆಲೆಯಲ್ಲಿ ಇಡೀ ಬೆಂಗಳೂರಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೈ ಅಲರ್ಟ್ ಯಾಕೆ..?
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿದ್ದ ಹೇಳಿಕೆ ಹಾಗೂ ಪಾಕಿಸ್ತಾನದ ಕುಕೃತ್ಯಗಳೇ ಈ ಹೈ ಅಲರ್ಟ್ಗೆ ಕಾರಣ. ಪಾಕಿಸ್ತಾನದ ಮೇಲೆ ಅಣುಬಾಂಬ್ ಪ್ರಯೋಗಕ್ಕೂ ನಾವು ಹಿಂದೆ ಸರಿಯಲ್ಲ. ಆದ್ರೆ, ನಾವೇ ಮೊದಲು ಬಾಂಬ್ ಹಾಕಲು ಹೋಗಲ್ಲ ಎಂದು ರಾಜನಾಥ್ ಸಿಂಗ್, ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ನೀಡಿದ್ರು.
ಈ ಮಧ್ಯೆ, ಪಾಕಿಸ್ತಾನದ ಸೇನೆ ಗಡಿಯಲ್ಲಿ ಸನ್ನದ್ಧವಾಗಿದೆ ಎಂಬ ಮಾಹಿತಿ ಇದೆ. ಗಡಿಯಲ್ಲಿ ಪಾಕಿಸ್ತಾನ ಸೇನೆ ಜಮಾವಣೆ ಮಾಡಿದ್ದು, ದಾಳಿ ನಡೆಸೋ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ, ಪಾಕಿಸ್ತಾನ ಸೇನೆಯನ್ನ ಪುಡಿ ಪುಡಿ ಮಾಡೋ ಶಕ್ತಿ ಭಾರತೀಯ ಸೇನೆಗಿದೆ.
ಭಯೋತ್ಪಾದಕ ದಾಳಿ ಸಾಧ್ಯತೆ..!
ಬೆಂಗಳೂರು ಸೇರಿದಂತೆ ದೆಹಲಿ, ಕೋಲ್ಕತ್ತಾ, ಹೈದ್ರಾಬಾದ್, ಮುಂಬೈ, ಚೆನ್ನೈನಂತಹ ಪ್ರಮುಖ ನಗರಗಳಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಕಿಸ್ತಾನ ಸೇನೆ, ಭಾರತವನ್ನ ನೇರವಾಗಿ ಏನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಹಿಂಬಾಗಿಲ ಮೂಲಕ ಭಯೋತ್ಪಾದಕರನ್ನ ಬಳಸಿ, ವಿಧ್ವಂಸಕ ಕೃತ್ಯಗಳನ್ನ ಎಸಗಲು ಸಂಚು ರೂಪಿಸಿದೆ ಎನ್ನಲಾಗಿದೆ.
ಯಾವುದೇ ಕ್ಷಣದಲ್ಲೂ, ಎಲ್ಲಿ ಬೇಕಾದರೂ ಭಯೋತ್ಪಾದಕ ದಾಳಿ ನಡೆಯೋ ಸಾಧ್ಯತೆಯನ್ನ ತಳ್ಳಿ ಹಾಕುವಂತಿಲ್ಲ. ಹೀಗಾಗಿ, ಎಲ್ಲೆಡೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಆದೇಶಿಸಲಾಗಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















