Featured
ಮಂಗಳವಾರ ಸಂಪುಟ ವಿಸ್ತರಣೆ : ಬಿಎಸ್ವೈಗೆ ಅಮಿತ್ ಶಾ ಗ್ರೀನ್ಸಿಗ್ನಲ್
![](https://risingkannada.com/wp-content/uploads/2019/08/WhatsApp-Image-2019-08-17-at-8.40.40-PM.jpeg)
ನವದೆಹಲಿ : ಅಂತೂ ಇಂತೂ ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿದೆ. ಕಳೆದ 22 ದಿನಗಳಿಂದ ಚಾತಕ ಪಕ್ಷಿಯಂತೆ ಕಾಯ್ತಿದ್ದ ಸಿಎಂ ಯಡಿಯೂರಪ್ಪ, ಇವತ್ತು ಕೊನೆಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನ ಭೇಟಿಯಾಗಿ, ಚರ್ಚೆ ನಡೆಸಿದ್ರು.
ಶುಕ್ರವಾರವಷ್ಟೇ ಪ್ರಧಾನಿ ಮೋದಿಯನ್ನ ಭೇಟಿಯಾಗಿ ಚರ್ಚ ನಡೆಸಿದ್ದ ಯಡಿಯೂರಪ್ಪ, ಇವತ್ತು ಸಂಜೆ ದೆಹಲಿಯಲ್ಲಿ ಅಮಿತ್ ಶಾ ಅವರನ್ನ ಭೇಟಿಯಾದ್ರು. ಈ ವೇಳೆ, ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮಾತುಕತೆ ನಡೆಸಿದ್ರು. ಯಡಿಯೂರಪ್ಪಗೆ ಸಂಪುಟ ವಿಸ್ತರಣೆ ಮಾಡಲು ಅಮಿತ್ ಶಾ ಈ ವೇಳೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಆದ್ರೆ, ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಅಮಿತ್ ಶಾ ಓಕೆ ಮಾಡಿಲ್ಲ..!
ಕೇವಲ 13 ಮಂದಿ ಸಚಿವರು ಮಾತ್ರ..!
ಅಮಿತ್ ಶಾ ಕೇವಲ 12 ರಿಂದ 13 ಸಚಿವರ ಹೆಸರನ್ನು ಮಾತ್ರ ಫೈನಲ್ ಮಾಡಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ 18 ಸಚಿವರ ಪಟ್ಟಿಯನ್ನು ಅಮಿತ್ ಶಾಗೆ ನೀಡಿದ್ರು. ಆದ್ರೆ, ಅಮಿತ್ ಶಾ, 12 ರಿಂದ 13 ಮಂದಿ ಸಂಪುಟಕ್ಕೆ ಸೇರ್ಪಡೆಗೆ ಮಾತ್ರ ಅನುಮತಿ ನೀಡಿದ್ದಾರೆ ಎಂಬ ಮಾಹಿತಿ ಇದೆ.
ಮಂಗಳವಾರ ಬೆಳಗ್ಗೆ 10ಕ್ಕೆ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ನಂತರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ.— CM of Karnataka (@CMofKarnataka) August 17, 2019
ಮಂಗಳವಾರ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಮುಹೂರ್ತ ಕೂಡ ಫಿಕ್ಸ್ ಆಗಿದೆ. ಆದ್ರೆ, ಯಾರೆಲ್ಲಾ ಸಚಿವರು ಆಗ್ತಾರೆ ಅನ್ನೋದನ್ನ ಇನ್ನೂ ಸಸ್ಪೆನ್ಸ್ ಆಗಿಯೇ ಇಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?