Featured
ಮಂಗಳೂರು DC ಸಸಿಕಾಂತ್ ಸೆಂಥಿಲ್ ರಾಜೀನಾಮೆ ಕೊಟ್ಟಿದ್ಯಾಕೆ..? ಆ ಪತ್ರದಲ್ಲಿ ಏನಿದೆ..?
Mangalore :
ಪ್ರಿಯ ಸ್ನೇಹಿತರೇ,
ಸಸಿಕಾಂತ್ ಸೆಂತಿಲ್ ಪತ್ರ..
ನಾನು ಇಂದು ನನ್ನ ಭಾರತೀಯ ಆಡಳಿತಾತ್ಮಕ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆಗೆ ವೈಯಕ್ತಿಕ ಕಾರಣಗಳಿವೆಯೇ ಹೊರತು ಯಾವುದೇ ವೈಮನಸ್ಸಿಲ್ಲ. ನನ್ನ ಸದ್ಯದ ಮಂಗಳೂರು ಡಿಸಿ ಪೋಸ್ಟ್ಗೂ ರಾಜೀನಾಮೆಗೂ ಸಂಬಂಧವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮತ್ತು ಅಧಿಕಾರಿಗಳಿಗೆ ನಾನು ಈ ಸಂದರ್ಭದಲ್ಲಿ ಕ್ಷಮೆ ಕೋರಲು ಇಚ್ಚಿಸುತ್ತೇನೆ. ಅವರ ಜತೆ ಕೆಲಸ ಮಾಡಿದ್ದು ಅವಿಸ್ಮರಣೀಯ. ಅರ್ಧದಲ್ಲೇ ರಾಜೀನಾಮೆ ನೀಡಿ ಹೋಗುತ್ತಿರುವುದಕ್ಕೆ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ.
ದೇಶದ ಸಂವಿಧಾನದ ಮೂಲ ಆಶಯಗಳು ಹಾದಿ ತಪ್ಪುತ್ತಿರುವ ಈ ದಿನಗಳಲ್ಲಿ ನಾನು ಭಾರತೀಯ ಆಡಳಿತಾತ್ಮಕ ಸೇವೆಯಲ್ಲಿ ಮುಂದುವರೆಯುವುದು ನನಗೆ ಸಮಂಜಸವೆನಿಸುತ್ತಿಲ್ಲ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ನಮ್ಮ ಪ್ರಜಾಪ್ರಭುತ್ವದ ತಳಹದಿ ಕುಸಿಯುತ್ತಿರುವಾಗ ನೈತಿಕವಾಗಿ ನನಗೆ ಈ ವೃತ್ತಿಯಲ್ಲಿ ಇರಲು ಇಷ್ಟವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ವಿಷಮಯ ಸ್ಥಿತಿ ಇನ್ನಷ್ಟು ಉಲ್ಬಣವಾಗಲಿದೆ. ನಾನು ಐಎಎಸ್ ವೃತ್ತಿಯ ಆಚೆಗಿದ್ದರೆ ದೇಶದ ಅಭಿವೃದ್ಧಿಗಾಗಿ, ಜನರಿಗಾಗಿ ಇನ್ನಷ್ಟು ಹೆಚ್ಚು ಕೆಲಸ ಮಾಡಬಹುದು. ಎಲ್ಲಾ ಅದರಪಾಡಿಗೆ ಆಗಲಿ ಎಂದು ಸುಮ್ಮನಾಗಲು ಇನ್ನು ಸಾಧ್ಯವಿಲ್ಲ.
ಇನ್ನೊಮ್ಮೆ ನನ್ನ ಜತೆ ಕೆಲಸ ಮಾಡಿದ ಎಲ್ಲರಿಗೂ, ರಾಜ್ಯದ ಜನರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಸಹೋದ್ಯೋಗಿಗಳು ಮತ್ತು ಅವರ ಕುಟುಂಬಸ್ಥರು ಸಂತಸದಿಂದಿರಲಿ ಎಂದು ಆಶಯಿಸುತ್ತೇನೆ.
ಎಸ್. ಸಸಿಕಾಂತ್ ಸೆಂತಿಲ್
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?