Connect with us

Featured

ಯಡಿಯೂರಪ್ಪ ಎಲ್ಲಿದ್ದೀಯಪ್ಪಾ.? : ರೋಮ್​ ದೊರೆ ನೀರೋಗೆ BSY ಹೋಲಿಸಿ JDS-ಕಾಂಗ್ರೆಸ್ ವ್ಯಂಗ..!

ಬೆಂಗಳೂರು : ಒಂದೆಡೆ ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿ ಹೋಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಪ್ರವಾಹಕ್ಕೆ ನಲುಗಿ ಹೋಗಿವೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಧಾರವಾಡ ಜಿಲ್ಲೆಗಳ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಬಹುತೇಕ ಎಲ್ಲಾ ಜಿಲ್ಲೆಗಳು ಪ್ರವಾಹದಿಂದ ಕಂಗೆಟ್ಟಿವೆ. ಇತ್ತ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ ಭಾಗದಲ್ಲೂ ಮಳೆ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಇಷ್ಟೆಲ್ಲಾ ಪ್ರವಾಹ, ಭಾರೀ ಮಳೆ, ರೆಡ್​ ಅಲರ್ಟ್​ ಇದ್ರೂ ಸಿಎಂ ಯಡಿಯೂರಪ್ಪ ಮಾತ್ರ ಬೆಂಗಳೂರಲ್ಲಿ ಇಲ್ಲ. ಬೆಂಗಳೂರಲ್ಲೇ ಅಲ್ಲ, ರಾಜ್ಯದಲ್ಲೇ ಇಲ್ಲ. ದೆಹಲಿಗೆ ಹೋಗಿ, ಸಂಪುಟ ಸರ್ಕಸ್​ ಮಾಡ್ತಿದ್ದಾರೆ ಎಂದು ಕಾಂಗ್ರೆಸ್-ಜೆಡಿಎಸ್​ ಆರೋಪಿಸಿವೆ.

ಈ ಕುರಿತು ಬೆಂಗಳೂರಿನ ಜೆಡಿಎಸ್​ ಸಭೆಯಲ್ಲಿ ಮಾತ್ನಾಡಿರೋ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಚುನಾವಣೆ ಸಮಯದಲ್ಲಿ ಎಲ್ಲರೂ ನಿಖಿಲ್ ಎಲ್ಲಿದ್ದೀಯಾಪ್ಪ ಎಂದು ಟ್ರೋಲ್ ಮಾಡಿದ್ರು. ಈಗ ಉತ್ತರ ಕರ್ನಾಟಕ ಜನ ಪ್ರವಾಹದಿಂದ ನಲುಗಿ ಹೋಗಿದ್ದಾರೆ. ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಎಂದು ಕೇಳ್ತಿದ್ದಾರೆ ಎಂದು ಹೆಚ್​ಡಿಕೆ ಚಾಟಿ ಬೀಸಿದ್ರು.

ಇದಕ್ಕೂ ಮುನ್ನ ಟ್ವೀಟ್​ ಮಾಡಿರೋ ಜೆಡಿಎಸ್​ ರಾಜ್ಯ ಘಟಕ, ರೋಮ್​​ ಹೊತ್ತಿ ಉರಿಯುತ್ತಿರುವಾಗ, ದೊರೆ ನೀರೋ ಪಿಟೀಲು ಬಾರಿಸ್ತಿದ್ದ.. ಅದರಂತೆ, ಇಡೀ ರಾಜ್ಯ ಮುಳುಗುವ ಸ್ಥಿತಿಯಲ್ಲಿದೆ. ಸಿಎಂ ಯಡಿಯೂರಪ್ಪ ಮಾತ್ರ ದೆಹಲಿಯಲ್ಲಿ ಸಂಪುಟ ವಿಸ್ತರಣೆ ಚರ್ಚೆಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ನೀರೋ ದೊರೆಗೆ ಸಿಎಂ ಯಡಿಯೂರಪ್ಪ ಅವರನ್ನ ಹೋಲಿಸಿದ್ದಾರೆ.

Advertisement
ಯಡಿಯೂರಪ್ಪ ವಿರುದ್ಧ JDS ಟ್ವೀಟ್​​

ಈ ಮಧ್ಯೆ, ಕಾಂಗ್ರೆಸ್ ನಾಯಕರು ಕೂಡ ಯಡಿಯೂರಪ್ಪ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರ ರಚನೆಯಾಗಿ 15 ದಿನವಾದ್ರೂ, ಒಬ್ಬರೇ ಒಬ್ಬ ಸಂಪುಟ ಸದಸ್ಯರಿಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಕಾಂಗ್ರೆಸ್​ ನಾಯಕರು ಕಿಡಿಕಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ಆರೋಪಿಸಿರೋ ಕಾಂಗ್ರೆಸ್​, ಯಡಿಯೂರಪ್ಪ ಇನ್ನೆಷ್ಟು ದಿನ ಏಕಪಾತ್ರಾಭಿನಯ ಮಾಡ್ಬೇಕು ಎಂದು ಪ್ರಶ್ನೆ ಮಾಡಿದೆ.

ಇದೆಲ್ಲದರ ಮಧ್ಯೆ, ಉತ್ತರ ಕರ್ನಾಟಕ ಜನ ಮಾತ್ರ ಭಾರೀ ಮಳೆ, ಪ್ರವಾಹಕ್ಕೆ ನಲುಗಿ ಹೋಗಿದ್ದಾರೆ. ಅಧಿಕಾರಿಗಳು ಎಷ್ಟೇ ಕಾರ್ಯಪ್ರೌವೃತ್ತಿಯಾಗಿ ಕೆಲಸ ಮಾಡಿದ್ರೂ, ನಾಯಕ ಇಲ್ಲದಿದ್ರೆ ಏನೂ ಆಗಲ್ಲ. ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಎಷ್ಟು ದಿನ ಹೀಗೆ, ಇರುತ್ತೋ ಏನೋ ಅನ್ನೋದು ಜನರ ಪ್ರಶ್ನೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ