Featured
ರಾಜ್ಯದಲ್ಲಿ ಶೀಘ್ರವೇ ಮಧ್ಯಂತರ ಚುನಾವಣೆ : ಸಿದ್ದರಾಮಯ್ಯ ಹೇಳಿಕೆಯ ಗುಟ್ಟೇನು..?
ಬೆಂಗಳೂರು/ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು ಅನ್ನೋದಕ್ಕೆ ಹಲವು ಉದಾಹರಣೆಗಳು ನಮ್ಮ ಮುಂದಿವೆ. ಅದರಂತೆ, ಕೆಲವೇ ದಿನಗಳಲ್ಲಿ ಮಧ್ಯಂತರ ಚುನಾವಣೆ ಬರಬಹುದು ಅನ್ನೋ ಮಾತುಗಳು ಕೇಳಿ ಬರುತ್ತಿವೆ.
ಇದಕ್ಕೆ ತಕ್ಕಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ, ಮಧ್ಯಂತರ ಚುನಾವಣೆಗೆ ರೆಡಿಯಾಗಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಈ ಮೂಲಕ ಎಲೆಕ್ಷನ್ಗೆ ತಯಾರಿ ನಡೆಸೋದಾಗಿ ಬಹಿರಂಗವಾಗಿಯೇ ಸಿದ್ದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರೋ ಸಿದ್ದರಾಮಯ್ಯ, ಹಾಲು ಕುಡಿತ ಮಕ್ಕಳೇ ಬದುಕೋದು ಕಷ್ಟ, ಇನ್ನು, ವಿಷ ಕುಡಿತ ಮಕ್ಕಳು ಬದುಕುತ್ತವಾ..? ಎಂದು ಪ್ರಶ್ನೆ ಮಾಡಿದ್ದಾರೆ. ಅಂದ್ರೆ, ಯಡಿಯೂರಪ್ಪ ನೇತೃತ್ವದ ಸರ್ಕಾರ ಉಳಿಯೋದು ಕಷ್ಟ. ಬಂಡಾಯ ಶಾಸಕರನ್ನ ಸೇರಿಸಿಕೊಂಡು ಸರ್ಕಾರ ನಡೆಸೋದು ಸುಲಭದ ಮಾತಲ್ಲ ಎಂದು ಸಿದ್ದು ಹೇಳಿದ್ದಾರೆ. ಇದೇ ವಿಚಾರವನ್ನ ಟ್ವಿಟ್ಟರ್ನಲ್ಲೂ ಹಂಚಿಕೊಂಡಿದ್ದಾರೆ.
ಒಂದೆಡೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಆಗಿದ್ದು ಯಾರಿಂದ ಅನ್ನೋ ಚರ್ಚೆ ನಡೀತಿದೆ. ಮತ್ತೊಂದೆಡೆ ಯಡಿಯೂರಪ್ಪ ಸರ್ಕಾರದಲ್ಲಿ ಯಾರು ಏನ್ ಮಾಡ್ತಿದ್ದಾರೆ ಅನ್ನೋದೇ ಗೊತ್ತಾಗ್ತಿಲ್ಲ. ಹೀಗಾಗಿ, ರಾಜ್ಯದಲ್ಲಿ ಯಾವಾಗ ಬೇಕಾದರೂ ಚುನಾವಣೆ ಬರಬಹುದು ಎನ್ನಲಾಗ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?