Featured
ವರಮಹಾಲಕ್ಷ್ಮಿ ಹಬ್ಬಕ್ಕೆ ಕುರುಕ್ಷೇತ್ರ ದರ್ಶನ : 5 ಭಾಷೆ.. ಎಷ್ಟು ಥಿಯೇಟರ್ ಗೊತ್ತಾ..?
ಬೆಂಗಳೂರು : ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇದೇ ಆಗಸ್ಟ್ 9ರಂದು ವಿಶ್ವಾದ್ಯಂತ ಬಿಡುಗಡೆ ಆಗ್ತಿದೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಕುರುಕ್ಷೇತ್ರ ರಿಲೀಸ್ ಆಗ್ತಿದೆ. ಕೆಜಿಎಫ್ ಸಿನಿಮಾ ಬಳಿಕ ಐದು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗ್ತಿರೋ ಕನ್ನಡ ಸಿನಿಮಾ ಕುರುಕ್ಷೇತ್ರ. ಹೀಗಾಗಿಯೇ ಸಾಕಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ. ಅಲ್ಲದೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಆಗಿರೋದ್ರಿಂದ, ನಿರೀಕ್ಷೆಗಳನ್ನ ಹೆಚ್ಚು ಮಾಡಿದೆ.
2500 ಥಿಯೇಟರ್ಗಳಲ್ಲಿ ಕುರುಕ್ಷೇತ್ರ ದರ್ಶನ..!
ಸದ್ಯ ರೈಸಿಂಗ್ ಕನ್ನಡಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಕುರುಕ್ಷೇತ್ರ 2500ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಬಿಡುಗಡೆ ಆಗ್ತಿದೆ. ಕನ್ನಡದಲ್ಲೇ ಸುಮಾರು 500ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಕುರುಕ್ಷೇತ್ರ ಬಿಡುಗಡೆ ಆಗ್ತಿದ್ದು, ತೆಲುಗು ಹಾಗೂ ಹಿಂದಿಯಲ್ಲಿ ಹೆಚ್ಚು ಥಿಯೇಟರ್ಗಳಲ್ಲಿ ರಿಲೀಸ್ ಆಗ್ತಿದೆ. ಒಟ್ಟಾರೆಯಾಗಿ ಇಡೀ ವಿಶ್ವಾದ್ಯಂತ ಸುಮಾರು 2500 ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಕುರುಕ್ಷೇತ್ರ ಪ್ರದರ್ಶನಕ್ಕೆ ರೆಡಿಯಾಗಿದೆ.
KGF ಮೀರಿಸುತ್ತಾ ಕುರುಕ್ಷೇತ್ರ..?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಹೊಸ ದಾಖಲೆಯನ್ನ ನಿರ್ಮಿಸಿತ್ತು. ಕನ್ನಡದಲ್ಲೇ ಅಲ್ಲದೆ ಎಲ್ಲಾ ಐದು ಭಾಷೆಗಳಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿತ್ತು. ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾದ ಸರದಿ. ಈಗಾಗ್ಲೇ ಒಳ್ಳೇ ಪ್ರೀ ರಿಲೀಸ್ ಬ್ಯುಸಿನೆಸ್ಮಾಡಿದೆ ಕುರುಕ್ಷೇತ್ರ. ಕನ್ನಡದಲ್ಲಿ ಕುರುಕ್ಷೇತ್ರ ಹಿಟ್ ಆಗೋದ್ರಲ್ಲಿ ಡೌಟೇ ಇಲ್ಲ. ಆದ್ರೆ, ಉಳಿದ ಭಾಷೆಗಳಲ್ಲೂ ಕೆಜಿಎಫ್ ರೀತಿ ಹಿಟ್ ಆಗುತ್ತಾ ಅನ್ನೋದು ಸದ್ಯ ಎಲ್ಲೆಡೆ ಚರ್ಚೆ ಆಗುತ್ತಿರೋ ವಿಷಯ.
ಆಲ್ ದಿ ಬೆಸ್ಟ್ ಟು ಕುರುಕ್ಷೇತ್ರ
ಅದೇನೇ ಆಗಲಿ. ಕನ್ನಡದ ಪೌರಾಣಿಕ ಸಿನಿಮಾ ಇಡೀ ದೇಶಾದ್ಯಂತ ಸದ್ದು ಮಾಡ್ತಿದೆ. ಇದು ಕನ್ನಡಿಗರ ಹೆಮ್ಮೆ ಅನ್ನೋದ್ರಲ್ಲಿ ಯಾವುದೇ ಅನುಮಾನ ಇಲ್ಲ. ಪ್ರತಿಯೊಬ್ಬ ಕನ್ನಡಿಗನೂ ಕುರುಕ್ಷೇತ್ರ ಸಿನಿಮಾ ನೋಡಿ, ಯಶಸ್ಸು ಸಿಗಲಿ ಅನ್ನೋದೇ ಎಲ್ಲರ ಆಶಯ. ಸೋ, ಆಲ್ ದಿ ಬೆಸ್ಟ್ ಟು ಕುರುಕ್ಷೇತ್ರ ಟೀಮ್..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?