ರೈಸಿಂಗ್ ಕನ್ನಡ : ಮುಂಗಾರು ಮಳೆಯ ಅಬ್ಬರ ಈ ವಾರ ಮತ್ತೆ ಜೋರಾಗುವ ಲಕ್ಷಣಗಳು ಕಾಣ್ತಿವೆ. ಈಗಾಗಲೇ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗೋ ಸಾಧ್ಯತೆ ಇದೆ ಎಂದಿದೆ. ಅದರಲ್ಲೂ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ಶಿವಮೊಗ್ಗ, ಕೊಡಗು ಹಾಗೂ ಬೆಳಗಾವಿಯಲ್ಲಿ ಹೆಚ್ಚು ಹೆಚ್ಚು ಮಳೆಯಾಗೋ ಸಾಧ್ಯತೆ ಇದೆ. ಮುಂದಿನ 72 ಗಂಟೆಗಳಲ್ಲಿ ಭಾರೀ ಮಳೆಯಾಗೋ ಸಾಧ್ಯತೆ ಇದೆ.
ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಮಾತ್ನಾಡಿರೋ ಸಚಿವ ಆರ್.ಅಶೋಕ್, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಕೇಂದ್ರದಿಂದ ಎನ್ಡಿಆರ್ಎಫ್ನ ಮೂರು ತಂಡಗಳು ಆಗಮಿಸುತ್ತಿವೆ. ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನ, ಮುಂಜಾಗೃತ ಕ್ರಮಗಳನ್ನ ಕೈಗೊಂಡಿರೋದಾಗಿ ಸಚಿವ ಆರ್.ಅಶೋಕ್ ತಿಳಿಸಿದ್ರು.
ಈ ಮಧ್ಯೆ, ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗಿರೋದ್ರಿಂದ, ಕೋಯ್ನ ಡ್ಯಾಂ ಸೇರಿದಂತೆ ಮಹಾರಾಷ್ಟ್ರದಿಂದ ಮತ್ತೆ ಒಳಹರಿವು ಹೆಚ್ಚಾಗಿದೆ. ಈಗಾಗಲೇ 1.5 ಲಕ್ಷ ಕ್ಯೂಸೆಕ್ ನೀರು ಹೊರಬರ್ತಿದ್ದು, ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?