Connect with us

Featured

ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ..! ಮೋದಿ ಭೇಟಿಯಾದ್ರೂ ಮುಹೂರ್ತ ಫಿಕ್ಸ್​ ಆಗಿಲ್ಲ ಯಾಕೆ..?

ನವದೆಹಲಿ/ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿ ಮಾಡಿ 370ನೇ ವಿಧಿ ವಿಚಾರವಾಗಿ ಶುಭ ಹಾರೈಸಿದ್ರು. ಇದೇ ವೇಳೆ ಸಿಎಂ ಯಡಿಯೂರಪ್ಪಗೆ ಪ್ರಧಾನಿ ಮೋದಿ, ಅಭಿನಂದನೆ ಕೂಡ ಸಲ್ಲಿಸಿದ್ರು. ಆದ್ರೆ, ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ 10 ದಿನಗಳೇ ಕಳೆದ್ರೂ, ಇನ್ನೂ ಸಚಿವ ಸಂಪುಟ ವಿಸ್ತರಣೆ ಮಾತ್ರ ಆಗಿಲ್ಲ. ಇನ್ನೇನು ಆಗಸ್ಟ್​ 8ರಂದು ಸಂಪುಟ ವಿಸ್ತರಣೆ ಆಗುತ್ತೆ ಅನ್ಕೊಂಡಿದ್ದ ನಾಯಕರಿಗೆ ಮತ್ತೊಂದು ಶಾಕ್​ ಕಾದಿದ್ದು, ಸದ್ಯಕ್ಕೆ ಸಂಪುಟ ವಿಸ್ತರಣೆ ಆಗಲ್ಲ ಎನ್ನಲಾಗಿದೆ.

ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರಧಾನಿ ಮೋದಿಯನ್ನ ಭೇಟಿಯಾಗಿದ್ರು. ಜೊತೆಗೆ ಹಲವು ಕೇಂದ್ರ ಸಚಿವರನ್ನು ಕೂಡ ಭೇಟಿಯಾಗಿ, ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ರು. ಆದ್ರೆ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಮಾತ್ರ ಯಡಿಯೂರಪ್ಪ ಭೇಟಿಯಾಗಲು ಸಾಧ್ಯವಾಗಿಲ್ಲ. ಅಮಿತ್ ಶಾ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಬ್ಯುಸಿಯಾಗಿದ್ದಾರೆ. 370ನೇ ವಿಧಿ ವಿಚಾರವಾಗಿ ಚರ್ಚೆ ಜೋರಾಗಿ ನಡೀತಿದೆ. ಹೀಗಾಗಿ, ಅಮಿತ್ ಶಾ ಭೇಟಿಯಾಗಲು ಯಡಿಯೂರಪ್ಪ ಅಂಡ್ ಟೀಮ್​ಗೆ ಸಾಧ್ಯವಾಗಿಲ್ಲ.

ಅಮಿತ್ ಶಾ ಭೇಟಿಯಾಗದ ಹೊರತು, ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್​ ಸಿಗ್ನಲ್​ ಸಿಗಲ್ಲ. ಅಮಿತ್ ಶಾ ಅಂತಿಮ ಮಾಡಿದ್ರಷ್ಟೇ ಯಡಿಯೂರಪ್ಪಗೆ ಸಂಪುಟ ವಿಸ್ತರಣೆ ಮಾಡಲು ಸಾಧ್ಯವಾಗುತ್ತೆ. ಆದ್ರೆ, ಈವರೆಗೆ ಶಾ ಅವರನ್ನ ಬಿಎಸ್​ವೈ ಭೇಟಿಯೇ ಆಗಿಲ್ಲ. ಹೀಗಾಗಿ, ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ.

ಸುಷ್ಮಾ ಸ್ವರಾಜ್​​ ನಿಧನದಿಂದಲೂ ಹಿನ್ನಡೆ

ಮತ್ತೊಂದೆಡೆ, ಬಿಜೆಪಿ ಹಿರಿಯ ನಾಯಕ ಸುಷ್ಮಾ ಸ್ವರಾಜ್​ ನಿಧನರಾಗಿದ್ದು, ಇದರಿಂದ ರಾಜ್ಯ ಬಿಜೆಪಿ ನಾಯಕರಿಗೆ ಮತ್ತಷ್ಟು ಹಿನ್ನಡೆಯಾಗಿದೆ. ಇವತ್ತು ಸುಷ್ಮಾ ಸ್ವರಾಜ್ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರ ನಡೆಯಲಿದೆ. ಹೀಗಾಗಿ, ಇವತ್ತು ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಅಸಾಧ್ಯ ಎನ್ನಲಾಗಿದೆ.

ಒಂದೆಡೆ ರಾಜ್ಯದಲ್ಲಿ ಪ್ರವಾಹ.. ಸಚಿವರೇ ಇಲ್ಲ..!

Advertisement

ಪರಿಸ್ಥಿತಿ ಹೀಗಿರುವಾಗ ರಾಜ್ಯದಲ್ಲಿ ಭೀಕರ ಪ್ರವಾಹ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರೋ ಮಳೆಯಿಂದ ಇಡೀ ಉತ್ತರ ಕರ್ನಾಟಕ ತತ್ತರಿಸಿದೆ. ಕೇವಲ ಅಧಿಕಾರಿಗಳು ಮಾತ್ರ ಕೆಲಸ ಮಾಡಬೇಕಾದ ಸ್ಥಿತಿ ಎದುರಾಗಿದೆ. ಒಂದೆಡೆ ಸಚಿವರಿಲ್ಲ. ಉಸ್ತುವಾರಿ ಮಂತ್ರಿಗಳಿಲ್ಲ.. ಸಿಎಂ ಬಿಎಸ್​ವೈ ದೆಹಲಿಯಲ್ಲಿದ್ದಾರೆ. ರಾಜ್ಯದ ಜನ ಮಾತ್ರ ಸಾಯುವ ಸ್ಥಿತಿ ತಲೆದೋರಿದೆ..

ಇನ್ನಾದ್ರೂ ಬಿಜೆಪಿ ನಾಯಕರು ರಾಜ್ಯದತ್ತ ಮುಖ ಮಾಡಿ, ಸಚಿವ ಸಂಪುಟ ವಿಸ್ತರಣೆ ಮಾಡಿ ಜನರ ಸಮಸ್ಯೆ ಆಲಿಸ್ತಾರಾ ಕಾದುನೋಡೋಣ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ