Featured
ಸಸಿಕಾಂತ್ ಸೆಂಥಿಲ್ ಪಾಕಿಸ್ತಾನಕ್ಕೆ ಹೋಗಿ : ಅನಂತ ಕುಮಾರ್ ಹೆಗಡೆ ಹೀಗೆ ಹೇಳಿದ್ದು ಯಾಕೆ..?

ಶಿರಸಿ/ಮಂಗಳೂರು : ಕೇಂದ್ರ ಸರ್ಕಾರದ ಕೆಲವು ನೀತಿ, ನಿಯಮಗಳ ವಿರುದ್ಧ ಬೇಸತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಸಸಿಕಾಂತ್ ಸೆಂಥಿಲ್ ಸಾಕಷ್ಟು ಸುದ್ದಿಯಾಗಿದ್ರು. ಇದರ ಬೆನ್ನಲ್ಲೇ, ಮಾಜಿ ಸಚಿವ, ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ. ಸೆಂಥಿಲ್ಗೆ ಪಾಕಿಸ್ತಾನಕ್ಕೆ ವಲಸೆ ಹೋಗಿ ಎಂದು ಅನಂತ ಕುಮಾರ್ ಹೆಗಡೆ ಟ್ವೀಟ್ ಮಾಡಿ, ವಿವಾದ ಸೃಷ್ಟಿಸಿದ್ದಾರೆ.
ಇಲ್ಲೇ ಇದ್ದು, ನಮ್ಮ ದೇಶ ಒಡೆಯುವ ಬದಲು. ಅಲ್ಲಿಗೆ ಹೋಗಿ, ನಮ್ಮ ದೇಶ, ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ಇಲಿತು. ಇದರಲ್ಲಾದರೂ ನಿಯತ್ತು ತೋರಿಸಲಿ ಎಂದು ಸಂಸದ ಅನಂತ ಕುಮಾರ್ ಹೆಗಡೆ ಟ್ವೀಟ್ ಮಾಡಿದ್ದಾರೆ. ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನೀಯತ್ತು ತೋರಿಸಲಿ. pic.twitter.com/unYJBBaKyz— Anantkumar Hegde (@AnantkumarH) September 8, 2019
ಕಾಶ್ಮೀರ ವಿಚಾರ, ತಲಾಕ್, ರಾಮಮಂದಿರ ವಿಚಾರವಾಗಿ ಕೇಂದ್ರ ಸರ್ಕಾರ ಸರಿಯಾಗಿ ನಡೆದುಕೊಂಡಿಲ್ಲ. ಹೀಗಾಗಿ ಬೇಸರದಿಂದ ನಾನು ಐಎಎಸ್ ಸ್ಥಾನಕ್ಕೆ ರಾಜೀನಾಮೆ ನೀಡ್ತಿರೋದಾಗಿ ಸಸಿಕಾಂತ್ ಸೆಂಥಿಲ್ ಹೇಳಿದ್ದರು. ಇದಕ್ಕೆ ಸಂಸದ ಅನಂತ ಕುಮಾರ ಹೆಗಡೆ ತಿರುಗೇಟು ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?