Connect with us

Featured

ಸುಷ್ಮಾ ಸ್ವರಾಜ್​ ಬದುಕಿನ ಹಾದಿ : ವಕೀಲೆಯಿಂದ ವಿದೇಶಾಂಗ ಸಚಿವೆವರೆಗೆ

ನವದೆಹಲಿ : ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ, ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹಿಂದಿನ ಸರ್ಕಾರದಲ್ಲಿ ವಿದೇಶಾಂಗ ಸಚಿವೆಯಾಗಿ, ಸಮರ್ಥವಾಗಿ ಖಾತೆ ನಿರ್ವಹಿಸಿದ್ದವರು ಸುಷ್ಮಾ ಸ್ವರಾಜ್​. ಸುಷ್ಮಾ, ಹರಿಯಾಣದ ಅಂಬಾಲಾ ಮೂಲದವರು. ಸುಪ್ರೀಂಕೋರ್ಟ್​ ವಕೀಲೆಯಾಗಿ ವೃತ್ತಿ ಬದುಕು ಆರಂಭಿಸಿದವರು ಸುಷ್ಮಾ. ಎಬಿವಿಪಿಯಲ್ಲಿ ಸಕ್ರಿಯರಾಗಿದ್ದ ಸುಷ್ಮಾ, ಬಳಿಕ ರಾಜಕೀಯಕ್ಕೆ ಧುಮುಕಿದ್ರು.

ಏಳು ಬಾರಿ ಸಂಸದರಾಗಿ, ಮೂರು ಬಾರಿ ವಿಧಾನಸಭಾ ಸದಸ್ಯರಾಗಿದ್ದವರು ಸುಷ್ಮಾ. ಸುಷ್ಮಾ ಸ್ವರಾಜ್ ಹುಟ್ಟಿದ್ದು 1952, ಫೆಬ್ರವರಿ 14ರಂದು ಹರಿಯಾಣದ ಅಂಬಾಲಾ ಕ್ಯಾಂಟ್ನಲ್ಲಿ. ಸಂಸ್ಕೃತ ಮತ್ತು ರಾಜ್ಯಶಾಸ್ತ್ರದಲ್ಲಿ ಪದವಿ ಪಡೆದು, ಬಳಿಕ ಕಾನೂನು ಅಭ್ಯಾಸ ಮಾಡಿದ್ರು ಸುಷ್ಮಾ. 1973ರಲ್ಲಿ ಸುಪ್ರೀಂಕೋರ್ಟ್​ನಲ್ಲಿ ವಕೀಲೆಯಾಗಿ ಅಭ್ಯಾಸ ಆರಂಭಿಸಿದ್ರು.

ರಾಜಕೀಯ ಜೀವನ

Advertisement

1970ರ ಸುಮಾರಿಗೆ ಎಬಿವಿಪಿಯಲ್ಲಿ ಗುರಿತಿಸಿಕೊಂಡಿದ್ದವರು ಸುಷ್ಮಾ. ಬಳಿಕ 1975ರಲ್ಲಿ ಜಾರ್ಜ್​ ಫರ್ನಾಂಡಿಸ್ ಅವರು ಕಾನೂನು ರಕ್ಷಣಾ ತಂಡದ ಭಾಗವಾಗಿದ್ರು. ಇದಾದ್ಮೇಲೆ ಜಯಪ್ರಕಾಶ್ ನಾರಾಯಣರ ಕ್ರಾಂತಿ ಚಳವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ರು. ತುರ್ತು ಪರಿಸ್ಥಿತಿ ಬಳಿಕ ರಾಜಕೀಯಕ್ಕೆ ಧುಮುಕಿದವರು ಸುಷ್ಮಾ.

1977ರಲ್ಲಿ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ರು. 25ನೇ ವಯಸ್ಸಿನಲ್ಲೇ ಶಾಸಕಿಯಾದ ಕೀರ್ತಿ ಸುಷ್ಮಾಗೆ ಸಲ್ಲುತ್ತೆ. ವಿಶೇಷ ಅಂದ್ರೆ, 1977ರಲ್ಲೇ ಕ್ಯಾಬಿನೆಟ್​ ಸಚಿವೆಯಾದ್ರು. 1979ರಲ್ಲಿ ಹರಿಯಾಣದ ಜನತಾ ಪಕ್ಷದ ಅಧ್ಯಕ್ಷೆ ಕೂಡ ಆದ್ರು. ಬಳಿಕ ಭಾರತೀಯ ಜನತಾ ಪಕ್ಷಕ್ಕೆ ಬಂದ ಸುಷ್ಮಾ, ಮತ್ತೆ ಹಿಂದೆ ತಿರುಗಿ ನೋಡಿದ್ದೇ ಇಲ್ಲ.

ಹರಿಯಾಣದಲ್ಲಿ ರಾಜ್ಯ ಸಚಿವೆಯಾಗಿ, ದೆಹಲಿ ಮುಖ್ಯಮಂತ್ರಿಯಾಗಿ, ಕೇಂದ್ರ ಸರ್ಕಾರದಲ್ಲಿ ವಿವಿಧ ಖಾತೆಗಳನ್ನ ನಿರ್ವಹಿಸಿದ ಖ್ಯಾತಿ ಸುಷ್ಮಾ ಸ್ವರಾಜ್​ ಅವರದ್ದು. ವಾಜಪೇಯಿ ಅವಧಿಯಲ್ಲೂ ಸಚಿವೆಯಾಗಿದ್ದ ಸುಷ್ಮಾ, ಮೋದಿ ಅವಧಿಯಲ್ಲೂ ಸಚಿವೆಯಾಗಿ ತಮ್ಮ ಖಾತೆಯನ್ನ ಸಮರ್ಥವಾಗಿ ನಿಭಾಯಿಸಿದ್ರು.

ಇಂದಿರಾಗಾಂಧಿ ಬಳಿಕ ವಿದೇಶಾಂಗ ಖಾತೆ ನಿರ್ವಹಿಸಿದ ಭಾರತದ ಎರಡನೇ ಮಹಿಳೆ ಸುಷ್ಮಾ ಸ್ವರಾಜ್​ ಆಗಿದ್ರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ