Featured
ಸ್ಮಾರ್ಟ್ ಸಿಟಿ ಯೋಜನೆ ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ರೈಸಿಂಗ್ ಕನ್ನಡ:- ರಾಜ್ಯದ ವಿವಿಧೆಡೆಗಳಲ್ಲಿ ಚಾಲನೆ ನೀಡಿರುವ ಸ್ಮಾರ್ಟ್ ಸಿಟಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹೊಸ ವರ್ಷದ ಮೊದಲನೆಯ ದಿನವಾದ ಇಂದು ನಗರದ ಹೊರವಲಯದಲ್ಲಿ ಆಯೋಜಿಸಲಾಗಿದ್ದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತಾನಾಡುತ್ತಿದ್ದ ಅವರು ವಿದ್ಯುತ್ ಸರಬರಾಜು ಕಂಪನಿಗಳು, ನಗರ ಸಭೆ ಹಾಗೂ ಪಾಲಿಕೆಗಳು, ಸಂಚಾರಿ ಪೊಲೀಸರು ಸಮನ್ವಯ ಸಾಧಿಸಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಸಾಕಾರಗೊಳಿಸಲು ತುರ್ತು ಕ್ರಮವಹಿಸಬೇಕು ಎಂದು ಹೇಳಿದರು.
ಮುಂದಿನ ಆಯವ್ಯಯದಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಒತ್ತು ನೀಡಲು ಯೋಜಿಸಿರುವ ಹಿನ್ನಲೆಯಲ್ಲಿ ಇಲಾಖವಾರು ರೂಪಿಸಬಹುದಾದ ಜನಪರ ಯೋಜನೆಗಳ ನೀಲನಕ್ಷೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದ ಅವರು 2022 ರ ಒಳಗೆ ರಾಜ್ಯದ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯ ನಕ್ಷೆಯಲ್ಲಿ ಹಾಗೂ ಸಮೃದ್ಧಿಯ ಕಕ್ಷೆಯಲ್ಲಿ ಕೊಂಡುಯ್ಯೊಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರಕ್ಕೆ ಬೆನ್ನೆಲುಬಾಗಿ ಹಾಗೂ ಬೆಂಬಲವಾಗಿ ಟೊಂಕ ಕಟ್ಟಿ ನಿಲ್ಲುವುದಾಗಿ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮುಖ್ಯಮಂತ್ರಿಯವರಿಗೆ ಈ ಸಂದರ್ಭದಲ್ಲಿ ಭರವಸೆ ನೀಡಿದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?