Connect with us

ಬೆಂಗಳೂರು

5 ಗ್ಯಾರಂಟಿ ರದ್ದು; ಶಾಸಕರ ಮೂಲಕ ಕಾಂಗ್ರೆಸ್ ಪಕ್ಷವೇ ಹೇಳಿಸಿದೆ ಎಂದ ನಿಖಿಲ್

ಬೆಂಗಳೂರು : ಲೋಕಸಭೆ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ವಾಪಸ್ ಪಡೆಯಲಿದೆ. ಅದೇ ಮಾತನ್ನು ತನ್ನ ಶಾಸಕರೊಬ್ಬರಿಂದ ಹೇಳಿಸಿದೆ ಎಂದು ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಾಗಡಿ ಶಾಸಕ ಬಾಲಕೃಷ್ಣ ಅವರು “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ” ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯ್ಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಪಕ್ಷ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಅಪ್ಪಣೆ ಇಲ್ಲದೆ ಶಾಸಕರು ಇಂಥ ಮಹತ್ವದ ಹೇಳಿಕೆಯನ್ನು ಅದೂ ಚುನಾವಣೆ ಹೊತ್ತಿನಲ್ಲಿ ಕೊಡಲು ಸಾಧ್ಯವೇ? ಅಲ್ಲಿಗೆ ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದಿರುವ ಅವರು; ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಒದ್ದಾಡುತ್ತಿರುವ ಸರಕಾರವು, ತನ್ನ ಶಾಸಕರೊಬ್ಬರ ಮೂಲಕ ರದ್ದು ಮಾಡುತ್ತೇವೆ ಎಂದು ಹೇಳಿಸಿದೆ ಎಂದೇ ಭಾವಿಸಬೇಕಾಗುತ್ತದೆ. ಅದು ನಿಜವೂ ಹೌದು ಎನ್ನುವುದು ನನ್ನ ಭಾವನೆ ಎಂದು ಅವರು ತಿಳಿಸಿದ್ದಾರೆ.

ಆ ಶಾಸಕರ ಹೇಳಿಕೆಯ ಧಾಟಿ ಹೇಗಿದೆ ಎಂದರೆ, ಅವರು ಜನರಿಗೆ ಸ್ಪಷ್ಟವಾದ ಬೆದರಿಕೆ ಒಡ್ಡಿದ್ದಿದ್ದಾರೆ. “ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ.. ಇಲ್ಲವಾದರೆ ನಿಮಗೆ ಕೊಟ್ಟಿರುವ ಗ್ಯಾರಂಟಿಗಳನ್ನು ಮುಲಾಜಿಲ್ಲದೆ ರದ್ದು ಮಾಡುತ್ತೇವೆ” ಎಂದು ಅವರು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ, ಜನರ ನಂಬಿಕೆಗೆ ಎಸಗಿದ ಅಪಚಾರ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು. ಚುನಾವಣೆಯಲ್ಲಿ ಗೆಲ್ಲುವ ಏಕೈಕ ಉದ್ದೇಶದಿಂದ ನೀವು ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟಿದ್ದಿರಿ. ಆಮೇಲೆ ಅವುಗಳನ್ನು ಜಾರಿ ಮಾಡಿದ್ದೀರಿ. ಗ್ಯಾರಂಟಿ ಕೊಡಿ, ನಿಮಗೆ ವೋಟು ಹಾಕುತ್ತೇವೆ ಎಂದು ಜನರೇನು ಕೇಳಿರಲಿಲ್ಲ. ವಾಸ್ತವ ಸ್ಥಿತಿ ಹೀಗಿದ್ದ ಮೇಲೆ ಈಗ ಗ್ಯಾರಂಟಿಗಳನ್ನು ಅದ್ಹೇಗೆ ವಾಪಸ್ ಪಡೆಯುತ್ತೀರಿ? ಕಾಂಗ್ರೆಸ್ ಸರಕಾರದ ವರ್ತನೆಗೆ ನನ್ನ ಹಾಗೂ ನಮ್ಮ ಪಕ್ಷದ ತೀವ್ರ ವಿರೋಧವಿದೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ