Featured
ದಾವಣಗೆರೆ ಜಿಲ್ಲೆಯಾದ್ಯಂತ ಬುಧವಾರ ಎಣ್ಣೆ ಸಿಗೋಲ್ಲ – ಜಿಲ್ಲಾಧಿಕಾರಿ ಆದೇಶ..!

ರೈಸಿಂಗ್ ಕನ್ನಡ :
ದಾವಣಗೆರೆ :
ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭೂಮಿ ಪೂಜೆ ನಡೆಯುತ್ತಿರುವುದರಿಂದ ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ಬುಧವಾರ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ದಾವಣಗೆರೆ ಸೂಕ್ಷ್ಮ ಪ್ರದೇಶವಾಗಿರೋದ್ರಿಂದ, ಯಾವುದೇ ಅವಘಡಗಳು ಜರುಗದಂತೆ ಕ್ರಮ ವಹಿಸಲಾಗಿದೆ. ಬುಧವಾರ ಹಿಂದೂಪರ ಸಂಘಟನೆಗಳು ಶ್ರೀರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಅಥವಾ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮ ದೆವರ ಭಾವಚಿತ್ರ, ಫ್ಲೆಕ್ಲ್, ಬ್ಯಾನರ್, ಬೊರ್ಡ್ ಇಟ್ಟು ಪೂಜೆ ಸಲ್ಲಿಸುವ ಸಾಧ್ಯತೆಗಳಿವೆ.
ಇದೇ ಸಂದರ್ಭದಲ್ಲಿ ಪಿಎಫ್‍ಐ, ಎಸ್‌ಡಿಪಿಐ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಯಿದೆ, ಆದ್ದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು, ದೇವರ ಪೋಟೋ, ಭಾವಚಿತ್ರಗಳನ್ನಿಟ್ಟು ಮೆರವಣಿಗೆ, ಬೈಕ್ ರ್ಯಾಲಿ, ಪಟಾಕಿ ಸಿಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಎಲ್‌ಇಡಿ ಅಳವಡಿಸುವುದನ್ನು ಬೆಳಗ್ಗೆ 6 ರಿಂದ ರಾತ್ರಿ 12 ರವರೆಗೆ ನಿಷೇಧಿಸಲಾಗಿದೆ.
ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ, ಗ್ರಾ.ಪಂ ವತಿಯಿಂದ ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಭಾವಚಿತ್ರ, ಬ್ಯಾನರ್, ಬಂಟಿಂಗ್ಸ್ ಹಾಕದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಮತ್ತು ಬುಧವಾರ ಜಿಲ್ಲೆಯಾದ್ಯಂತ ಎಲ್ಲಾ ಪಟಾಕಿ ಅಂಗಡಿಗಳು ಹಾಗೂ ನಾಳೆ ಬೆಳಗ್ಗೆ 6 ರಿಂದ ರಾತ್ರಿ 12 ರವರೆಗೆ ಜಿಲ್ಲೆಯದ್ಯಂತ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಲಾಗಿದೆ ಎಂದು ಆದೇಶಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?