Featured
ಮಳೆ ಅಬ್ಬರದ ಬಗ್ಗೆ ರೆಡ್ ಅಲರ್ಟ್- ಕರ್ನಾಟಕದಲ್ಲಿ ಜೋರು ಮಳೆ ಗ್ಯಾರೆಂಟಿ..!
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಚೆನ್ನಾಗಿ ಆಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಮಲೆನಾಡು, ಮುಂಬೈ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ಜೋರು ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಗುಡ್ಡ ಕುಸಿತದಿಂದಾಗಿ ರಸ್ತೆಗಳು ಬಂದ್ ಆಗಿವೆ. ವಿದ್ಯುತ್ ಕಡಿತಗೊಂಡಿದೆ.
ಈ ಮಧ್ಯೆ ಹವಾಮಾನ ಇಲಾಖೆ ಕರ್ನಾಟಕದ 7 ಜಿಲ್ಲೆಗಳಲ್ಲಿ 3 ದಿನಗಳ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯ ಸೂಚನೆ ನೀಡಿದೆ. ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಮತ್ತು ಕಲಬುರಗಿಯಲ್ಲಿ ಸಾಧಾರಣಾ ಮಳೆ ಬೀಳಲಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಇತರೆ ಜಿಲ್ಲೆಗಳಲ್ಲಿಕಡಿಮೆ ಮಳೆಯಾಗಲಿದೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವ ಕಾರಣದಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಮತ್ತು ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣೆ ಹಾಗೂ ಅದರ ಉಪನದಿಗಳು ಮೈದುಂಬಿ ಹರಿಯುತ್ತಿವೆ. ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸರ್ವ ಸನ್ನದ್ಧವಾಗಿದೆ. ಅಷ್ಟೇ ಅಲ್ಲ ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ಒದಗಿಸುವಂತೆಯೂ ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?