Featured
ಕೇರಳದಲ್ಲಿ ಪ್ರವಾಹ ಮಳೆ : ಮುನ್ನಾರ್‌ನಲ್ಲಿ ಭಾರೀ ಭೂ ಕುಸಿತ : ಐವರ ಸಾವು
![](https://risingkannada.com/wp-content/uploads/2020/08/kerla-floods-2.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ದೇವರ ನಾಡು ಕೇರಳದಲ್ಲಿ ಪ್ರವಾಹ ರೀತಿಯ ಮಳೆಯಾಗುತ್ತಿದ್ದು ಭೂ ಕುಸಿತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಕೇರಳದ ಮುನ್ನಾರ್‌ನಲ್ಲಿ ಭಾರೀ ಭೂ ಕುಸಿತ ಸಂಭವಿಸಿದೆ. ಇಲ್ಲಿನ ಪೆಟ್ಟಿಮುಡಿ ಬೆಟ್ಟ ಶುಕ್ರವಾರ ಬೆಳಗಿನ ಜಾವ ಕುಸಿದು ಬಿದ್ದ ಪರಿಣಾಮ ಐವರು ಸಾವನಪ್ಪಿದ್ದಾರೆ. ಇನ್ನು ನೂರಾರು ಮಂದಿ ಸಿಲುಕಿಕೊಂಡಿದ್ದಾರೆ.
ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರಳಿ ಸುಮಾರು 80 ಮಂದಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದುರಂತ ನಡೆದಾಗ ಆ ಪ್ರದೇಶ ಇಡೀ ಜಗತ್ತಿನ ಸಂಪರ್ಕ ಕಳೆದುಕೊಂಡಿತ್ತು. ತಕ್ಷಣ ಅಗ್ನಿಶಾಮಕ ದಳ ರಕ್ಷಣ ಪಡೆ ಸಿಬ್ಬಂದಿ ಎನ್.ಡಿ.ಆರ್.ಎಫ್, ಕಂದಾಯ ಇಲಾಖೆ, ಎಸ್ಟೇಟ್ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವವರನ್ನ ಹೊರ ತೆಗೆದಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಮಣ್ಣಿನಡಿಯಲ್ಲಿ ಸಿಲುಕಿದ್ದ ಏಳು ಮಂದಿಯನ್ನ ರಕ್ಷಿಸಲಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಐವರು ಶವವನ್ನ ಹೊರ ತೆಗೆಯಲಾಗಿದೆ. ಭಾರೀ ಮಳೆ ಸುರಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಭಾರತೀಯ ವಾಯು ಸೇನೆಯ ನೆರವು ಕೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?