Featured
ಮಹಾರಾಷ್ಟ್ರದಲ್ಲಿ ‘ಮಹಾ’ಮಳೆ : ಆಲಮಟ್ಟಿ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್ ನೀರು

ರೈಸಿಂಗ್ ಕನ್ನಡ:
ವಿಜಯಪುರ:
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ 26 ಗೇಟ್ಗಳನ್ನು ತೆರೆದು 1.50 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಮಹಾರಾಷ್ಟ್ರದ ಜಲಾಶಯಗಳಿಂದಲೂ ಅಧಿಕ ಪ್ರಮಾಣ ನೀರು ಹರಿದು ಬರುತ್ತಿರುವ ಕಾರಣ ಒಳಹರಿವು 1.50 ಲಕ್ಷ ಕ್ಯೂಸೆಕ್ ಬಂದಿದೆ.
ಸದ್ಯ ಜಲಾಶಯದ ನೀರಿ ಸಂಗ್ರಹ 97.27 ಟಿಎಂಸಿ ನೀರು ಸಂಗ್ರಹಿಸಲಾಗಿದೆ. ಸಂಜೆಯವರೆಗೆ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಕಾರಣ ಸಂಜೆ 2 ಲಕ್ಷ ಕ್ಯೂಸೆಕ್ ನೀರು ಹರಿಬಿಡುವ ಸಾಧ್ಯತೆ ಇದೆ. ಜಲಾಶಯ ಭರ್ತಿಗೆ ದಿನಗಣನೆ ಆರಂಭವಾಗಿದೆ.
ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಇದ್ದು, ಈಗಾಗಲೇ 517.96 ಮೀಟರ್ ಜಲಾಶಯ ದಲ್ಲಿ ಹರಿಯುತ್ತಿದೆ. ಕಳೆದ ವರ್ಷ ಇದೇ ದಿನ 517.27 ಮೀಟರ್ ನೀರು ಹರಿಯುತ್ತಿತ್ತು. ಜಲಾಶಯದಲ್ಲಿರುವ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಸದ್ಯ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಸದ್ಯ 33ಸಾವಿರ ಕ್ಯೂಸೆಕ್ ನೀರನ್ನು ಬಳಸಿಕೊಂಡು 215 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
ವಿದ್ಯುತ್ ಉತ್ಪಾದನೆ ಬೇಡಿಕೆ ಹೆಚ್ಚಾದರೆ ರಾತ್ರಿ ಸಹ ಇನ್ನಷ್ಟು ನೀರು ಪಡೆದು ವಿದ್ಯುತ್ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಲಾಗಿದೆಎಂದು ಕೆಬಿಜೆಎನ್ಎಲ್ ತಿಳಿಸಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?