Featured
ನಡುಗಡ್ಡೆಯಲ್ಲಿ ಸಿಲುಕಿದ ಕುರಿಗಾಯಿ ರಕ್ಷಣೆಗೆ ಶಾಸಕ ರಾಜುಗೌಡ ಸ್ಥಳದಲ್ಲೇ ಬಿಡಾರ..!
ರೈಸಿಂಗ್ ಕನ್ನಡ :
ಪ್ರತಿನಿಧಿ, ದುರ್ಗೇಶ್ ಮಂಗಿಹಾಳ, ಯಾದಗಿರಿ :
ಕಳೆದ ಮೂರ್ನಾಲ್ಕು ದಿನಗಳಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾ ಮಳೆಗೆ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಛಾಯಭಗವತಿ ದೇವಸ್ಥಾನದ ಸಮೀಪ ಕೃಷ್ಣಾ ನದಿಯಲ್ಲಿ ಕುರಿ ಮೇಯಿಸಲು ತೆರಳಿದ್ದ ಕುರಿಗಾಹಿ ಅಲ್ಲೇ ಸಿಲುಕಿಕೊಂಡಿದ್ದಾನೆ. ಎರಡು ಬದಿಯಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು ನಡುಗಡ್ಡೆಯಲ್ಲಿ ಕುರಿಗಾಯಿ ಸಿಲುಕ್ಕಿದ್ದು, ಕುರಿಗಾಯಿಯನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ.
ಕಳೆದ ಮೂರು ದಿನಗಳಿಂದ ನಡುಗಡ್ಡೆಯಲ್ಲಿ ಕುರಿಗಾಯಿ ಸಿಲುಕ್ಕಿದ್ದಾನೆ. ಘಟನ ಸ್ಥಳಕ್ಕೆ ಸುರಪುರ ಶಾಸಕ ರಾಜುಗೌಡ ತೆರಳಿ ಪರಿಶೀಲನೆ ನಡೆಸಿದ್ದು, ಕುರಿಗಾಯಿಯನ್ನು ರಕ್ಷಣೆ ಮಾಡಲು ಎನ್ ಡಿ ಆರ್ ಎಫ್ ತಂಡ ಆಗಮಿಸಿದ್ದು ಕುರಿಗಾಯಿಯನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ.
ನೂರಕ್ಕೂ ಹೆಚ್ಚು ಕುರಿಗಳೊಂದಿಗೆ ನಡುಗಡ್ಡೆಗೆ ತೆರಳಿದ್ದ ಏಕಾಏಕಿ ಕೃಷ್ಣಾ ನದಿಯಲ್ಲಿ ಪ್ರವಾಹ ಬಂದಿದೆ ಎಲ್ಲೂ ಹೋಗಲು ಸಾಧ್ಯವಾಗ್ತಿಲ್ಲ. ಹತ್ತಕ್ಕು ಹೆಚ್ಚು ಎನ್ ಡಿ ಆರ್ ಎಫ್ ತಂಡದ ಸಿಬ್ಬಂದಿ ಬೋಟ್ ಮೂಲಕ ರಕ್ಷಣೆ ಕಾರ್ಯಚರಣೆ ಮಾಡ್ತಿದ್ದಾರೆ. ಶಾಸಕ ರಾಜುಗೌಡ, ತಹಶಿಲ್ದಾರರು ಹಾಗೂ ಇತರ ಅಧಿಕಾರಿಗಳು ಸಿಬ್ಬಂದಿಗಳು ಸ್ಥಳದಲ್ಲೆ ಬೀಡುಬಿಟ್ಟಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?