Featured
ತುಮಕೂರಲ್ಲಿ ಕೊರೊನಾಗೆ ಮಹಿಳೆ ಬಲಿ: 73 ಮಂದಿಗೆ ಕೊರೊನಾ: 103 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ :
ತುಮಕೂರು :
ಜಿಲ್ಲೆಯಲ್ಲಿ ಸೋಮವಾರ 73 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು 103 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕು ವಾರು ಹೊಸ ಪ್ರಕರಣಗಳು
ತುಮಕೂರು 9 , ಚಿಕ್ಕನಾಯಕನ ಹಳ್ಳಿ 3 , ಪಾವಗಡ 8, ತಿಪಟೂರು 17, ಮದುಗಿರಿ 6, ಕೊರಟಗೆರೆ 2, ಕುಣಿಗಲ್ 17, ತುರುವೇಕೆರೆ 0, ಶಿರಾ 6, ಗುಬ್ಬಿ 5, ಒಟ್ಟು 73 ಜನ ಸೊಂಕಿತರು ಇಂದು ಪತ್ತೆಯಾಗಿದ್ದಾರೆ.
ತುಮಕೂರು ತಾಲ್ಲೂಕಿನಲ್ಲಿ ಕೊರೊನಾಗೆ ಮಹಿಳೆ ಬಲಿ
ಜಿಲ್ಲೆಯಲ್ಲಿ ಸೊಮವಾರ ವೃದ್ದ ಮಹಿಳೆಯೊಬ್ಬರು ಕೊರೊನಾ ಸೊಂಕಿನಿಂದ ಸಾವನ್ನಪ್ಪಿದ್ದಾರೆ. ಜ್ವರ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ವೃದ್ಧೆಗೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 80 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
103 ಜನ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಜಿಲ್ಲೆಯಲ್ಲಿ ಇಂದು 103 ಜನ ಸೊಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಜಿಲ್ಲೆಯಲ್ಲಿ ಅತಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ 2,679 ಮಂದಿ ಸೋಂಕಿತರಲ್ಲಿ ಈವರೆಗೆ 1,693 ಜನರು ಕೊವಿಡ್ ನಿಂದ ಗುಣಮುಖರಾಗಿದ್ದಾರೆ . ಉಳಿದ 906 ಮಂದಿ ಸಕ್ರಿಯ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 5,132 ಜನರನ್ನ ನಿಗಾವಣೆಯಲ್ಲಿಡಲಾಗಿದ್ದು ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾದ್ಯತೆ ದಟ್ಟವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?