Featured
ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಪಾಲು – ಸುಪ್ರೀಂ ಕೋರ್ಟ್ ಮಹತ್ವದ ಆದೇಶ..!
![](https://risingkannada.com/wp-content/uploads/2020/07/supreme-court_reuters.jpg)
ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಹಿಂದೂ ಉತ್ತರಾಧಿಕಾರ ಕಾಯ್ದೆ 2005 ರ ತಿದ್ದುಪಡಿಗೆ ಅನುಗುಣವಾಗಿ ಹೆಣ್ಣುಮಕ್ಕಳಿಗೆ ಪೋಷಕರ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎಂದು ಅಭಿಪ್ರಾಯಪಟ್ಟಿದೆ.
2005 ರ ತಿದ್ದುಪಡಿಗೆ ಅನುಗುಣವಾಗಿ ಹೆಣ್ಣುಮಕ್ಕಳಿಗೂ ಆಸ್ತಿಯಲ್ಲಿ ಸಮಾನವಾದ ಹಕ್ಕಿದೆ. ಅದೇ ರೀತಿ ತಿದ್ದುಪಡಿ ಸಮಯದಲ್ಲಿ ತಂದೆ ಜೀವಂತವಾಗಿದ್ದರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ಆಕೆಗೆ ಅನುವಂಶಿಕ ಹಕ್ಕು ನೀಡಲಾಗುವುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
2005 ರ ಸೆಪ್ಟೆಂಬರ್ 9 ರಂದು ತಿದ್ದುಪಡಿ ಪ್ರಕಾರ ತಂದೆ ಮತ್ತು ಮಗಳು ಇಬ್ಬರೂ ಜೀವಂತವಾಗಿದ್ದರೆ ಮಾತ್ರ ಆಕೆಗೆ ಸಮಾನ ಹಕ್ಕು ಇರುತ್ತದೆ ಎಂದು ಉನ್ನತ ನ್ಯಾಯಾಲಯದ ಹಿಂದಿನ ತೀರ್ಪುಗಳನ್ನ ತಿದ್ದುಪಡಿ ಮಾಡಿ ಇದೀಗ ಹೊಸ ತೀರ್ಪು ನೀಡಿದೆ. ತಿದ್ದುಪಡಿಯ ದಿನಾಂಕದಂತೆ ಮಗಳು, ಜೀವಂತವಾಗಿದ್ದರೆ ಅಥವಾ ಸತ್ತರೂ ಸಹ ತನ್ನ ತಂದೆಯ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರಾಗಿರುತ್ತಾರೆ.
ಇದರರ್ಥ ತಿದ್ದುಪಡಿಯ ದಿನಾಂಕದಂದು ಮಗಳು ಜೀವಂತವಾಗಿಲ್ಲದಿದ್ದರೂ ಸಹ, ಆಕೆಯ ಮಕ್ಕಳು ಆಸ್ತಿಯನ್ನು ಪಡೆಯಬಹುದು ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?