ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಕಳೆದ ಕೆಲ ದಿನಗಳಿಂದ ಸಂಜಯ್ ದತ್ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ 61 ವರ್ಷದ ಸಂಜಯ್ ದತ್ ಅವರಿಗೆ ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಯುಎಸ್ಗೆ ತೆರಳಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ಟ್ವೀಟ್ ಮಾಡಿದ್ದು, “ನೀವು ಫೈಟರ್, ಅಷ್ಟು ಬೇಗ ಸೋಲನ್ನು ಒಪ್ಪಿಕೊಳ್ಳುವವರಲ್ಲ. ಈ ನೋವು ನನಗೆ ಚೆನ್ನಾಗಿಯೆ ತಿಳಿದಿದೆ. ಗಟ್ಟಿಜೀವ ಸಂಜಯ್ ದತ್ ಕ್ಯಾನ್ಸರ್ ಜೊತೆ ಗುದ್ದಾಡಿ ಗೆದ್ದು ಬರಲಿ” ಎಂದು ಯುವಿ ಸ್ಫೂರ್ತಿದಾಯಕ ಸಂದೇಶ ಹೇಳಿದ್ದಾರೆ.
ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗುವಂತೆ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಸಂಜಯ್ ದತ್ ಆಪ್ತ ಸ್ನೇಹಿತ ಇಂಗ್ಲೀಷ್ ವೆಬ್ ಪೋರ್ಟಲ್ ಜೊತೆ ಮಾತನಾಡಿ “ಸಂಜಯ್ ದತ್ ಸದ್ಯ ದುಬೈನಲ್ಲಿರುವ ತನ್ನ ಪುಟ್ಟ ಮಕ್ಕಳು ಮತ್ತು ಪತ್ನಿಯ ಬಗ್ಗೆ ಆತಂಕಗೊಂಡಿದ್ದಾರೆ. ಸದ್ಯ ಪತ್ನಿ ಮತ್ತು ಮಕ್ಕಳು ದುಬೈನಲ್ಲಿದ್ದಾರೆ. ಕ್ಯಾನ್ಸರ್ ಗುಣಪಡಿಸಬಹುದು, ಆದರೆ ಕಠಿಣ ಚಿಕಿತ್ಸೆಯ ಅಗತ್ಯವಿದೆ” ಎಂದು ಹೇಳಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?