Featured
ಕ್ರಿಕೆಟ್ನಲ್ಲಿ ವಿರಾಟ್ ಕಿಂಗ್- ಟೀಮ್ ಇಂಡಿಯಾವೇ ದಿ ಬೆಸ್ಟ್-ಆನ್ಲೈನ್ ಅಧ್ಯಯನದಲ್ಲಿ ಬಯಲಾಯಿತು ಸತ್ಯ..!
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಮತ್ತು ಟೀಮ್ ಇಂಡಿಯಾ ಆಟಗಾರರ ಜನಪ್ರಿಯತೆಗೆ ಮಿತಿಇಲ್ಲ. ಈಗ ಇದು ಮತ್ತೊಮ್ಮೆ ಸ್ಪಷ್ಟವಾಗಿದೆ. ಅಧ್ಯಯನವೊಂದರ ವರದಿ ಪ್ರಕಾರ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಪ್ರಿಯ ಕ್ರಿಕೆಟ್ ಆಟಗಾರ. ಟೀಮ್ ಇಂಡಿಯಾ ಅತ್ಯಂತ ಜನಪ್ರಿಯ ಕ್ರಿಕೆಟ್ ತಂಡ.
ಅಧ್ಯಯನದಲ್ಲಿ ದಾಖಲಾಗಿರುವ ಪ್ರಕಾರ ಕಳೆದ ವರ್ಷ ಜನವರಿಯಿಂದ ಈ ಜೂನ್ ತನಕ ವಿರಾಟ್ ಕೊಹ್ಲಿಯನ್ನು ಆನ್ಲೈನ್ನಲ್ಲಿ ತಿಂಗಳಿಗೆ 16.2 ಲಕ್ಷದಷ್ಟು ಬಾರಿ ಹುಡುಕಲಾಗಿದೆ. ಇದೇ ಅವಧಿಯಲ್ಲಿ ಟೀಮ್ ಇಂಡಿಯಾವನ್ನು ತಿಂಗಳಿಗೆ ಸರಾಸರಿ 2.4 ಲಕ್ಷ ಬಾರಿ ಹುಡುಕಲಾಗಿದೆ.
ಟೀಮ್ ಇಂಡಿಯಾದ ಓಪನರ್ ರೋಹಿತ್ ಶರ್ಮಾ, ಮಾಜಿ ನಾಯಕ ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯಾ, ಸಚಿನ್ ತೆಂಡುಲ್ಕರ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಕ್ರಿಕೆಟಿಗರ ವಲಯದಲ್ಲಿ ಅತೀ ಹೆಚ್ಚು ಬಾರಿ ಸರ್ಚ್ಗೆ ಒಳಗಾಗಿದ್ದಾರೆ. ಟೀಮ್ ಇಂಡಿಯಾದ ಬಹುತೇಕ ಆಟಗಾರರು ಆನ್ಲೈನ್ನಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದಾರೆ.
ಕ್ರಿಕೆಟ್ ತಂಡಗಳ ಪೈಕಿ ಟೀಮ್ ಇಂಡಿಯಾಕ್ಕೆ ಸರ್ಚಿಂಗ್ನಲ್ಲಿ ಅಗ್ರಸ್ಥಾನವಾದರೆ ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ನ್ಯೂಜಿಲೆಂಡ್, ಶ್ರೀಲಂಕಾ, ಐರ್ಲೆಂಡ್, ಅಫ್ಘಾನಿಸ್ತಾನ ಮತ್ತು ಜಿಂಬಾಬ್ವೆ ನಂತರದ ಸ್ಥಾನಗಳನ್ನು ಪಡೆದುಕೊಂಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?