Featured
ಪಿಯುಸಿ ಅಡ್ಮಿಷನ್ಗೆ ಸರ್ಕಾರದ ಆದೇಶ- ಇಂದಿನಿಂದಲೇ ಪ್ರವೇಶ ಪ್ರಕ್ರಿಯೆ ಶುರು
![](https://risingkannada.com/wp-content/uploads/2020/08/PC-BOARD.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ಎಸ್ಎಸ್ಎಲ್ಸಿ ಫಲಿತಾಂಶ ಬೆನ್ನಲ್ಲೇ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಯಾವ ಕಾಲೇಜುಗಳಲ್ಲಿ ಆನ್ಲೈನ್ ಸೌಕರ್ಯ ಇದೆಯೋ ಆ ಕಾಲೇಜಿಗಳಲ್ಲಿ ಆನ್ಲೈನ್ ಮೂಲಕವೇ ಪ್ರವೇಶಾತಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ . ಆನ್ಲೈನ್ ಅಡ್ಮಿಷನ್ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ಎಂದಿನಂತೆ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯ ಎಂದು ಆದೇಶಿಸಲಾಗಿದೆ.
ಕಲಾ ವಿಭಾಗ, ವಾಣಿಜ್ಯ ವಿಭಾಗ ಮತ್ತು ವಿಜ್ಞಾನ ವಿಭಾಗಕ್ಕೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಆದ್ರೆ ಅಡ್ಮಿಷನ್ ವೇಳೆ ಕೊರೋನಾ ನೆಪದಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವಂತಿಲ್ಲ. ಒಂದುವೇಳೆ ಪದವಿಪೂರ್ವ ಕಾಲೇಜುಗಳು ಇಚ್ಛಿಸಿದರೆ ಕಡಿಮೆ ಶುಲ್ಕ ಪಡೆಯಬಹುದು. ತರಗತಿಗಳ ಆರಂಭ ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲು ನಿರ್ಧಾರ ಮಾಡಲಾಗಿದೆ. ಇದರ ಜೊತೆಗೆ ಶಿಕ್ಷಕರ ವಿವರಗಳನ್ನೂ ಪೋಷಕರಿಗೆ ತಿಳಿಸುವಂತೆ ಸೂಚನೆ ನೀಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?