Featured
ಮಾಜಿ ಸಿಎಂ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ- ಸಿದ್ಧರಾಮಯ್ಯ ಭಯೋತ್ಪಾದಕರ ಪರವೋ..? ದಲಿತರ ಪರವೋ..? ಕಟೀಲ್ ಪ್ರಶ್ನೆ
![](https://risingkannada.com/wp-content/uploads/2020/08/Naleen-kumar-kateel.jpg)
ರೈಸಿಂಗ್ ಕನ್ನಡ:
ನಾಗರಾಜ್. ವೈ. ಕೊಪ್ಪಳ:
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಯ ಹುಟ್ಟಿಸುವ ಭಯೋತ್ಪಾದಕರ ಪರವಾಗಿಯೊ? ದಲಿತರ ಪರವಾಗಿಯೊ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಕೊಪ್ಪಳದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್, ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ ಸಿದ್ದರಾಮ್ಯ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯಲ್ಲಿ ಓಲೈಕೆ ರಾಜಕೀಯ ಮಾಡಿದ್ದರು. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಹಿಂದೂಗಳ ಹತ್ಯೆ ನಡೆದ ವೇಳೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯನವರೇ ಗಲಾಟೆಗೆ ನೇರ ಕಾರಣ ಎಂದು ಹೇಳುವುದಿಲ್ಲ. ಆದರೆ ಸಿಎಂ ಆಗಿದ್ದಾಗ ಕಠಿಣ ಕಾನೂನು ಕ್ರಮ ಕೈಗೊಳ್ಳದಿರುವುದರಿಂದ ಈ ಜನರಿಗೆ ಧೈರ್ಯ ಬಂದಿದೆ.
ಪುಂಡ ಪೋಕರಿಗಳು ಪೊಲೀಸರು, ಮಾಧ್ಯಮದವರಿಗೆ, ಸಾರ್ವಜನಿಕರಿಗೆ ಹಾಗೂ ಜನಪ್ರತಿನಿಧಿಗಳಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಭಯ ಸೃಷ್ಟಿಸುತ್ತಿರುವ ಭಯೋತ್ಪಾದಕರ ಪರವಾಗಿ ನಿಲ್ಲುತ್ತೀರೊ? ದಲಿತ, ಸಜ್ಜನ ಶಾಸಕರ ಪರವಾಗಿ ನಿಲ್ಲುತ್ತೀರಾ ಎನ್ನುವುದನ್ನು ಸಿದ್ದರಾಮಯ್ಯನವರೇ ಹೇಳಬೇಕು ಎಂದು ಕಟೀಲ್ ಟೀಕಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?