ರೈಸಿಂಗ್ ಕನ್ನಡ :
ಬೆಂಗಳೂರು:
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದರಿಂದ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.
ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಸಿಬ್ಬಂದಿಗೆ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಗುಣಮುಖರಾಗುವಂತೆ ತಮಗೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ. ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?