Connect with us

Featured

ಕೃಷಿ ಹೊಂಡದಲ್ಲಿ ಮೂವರು ಬಾಲಕರ ದುರ್ಮರಣ:ಮೃತರ ಕುಟುಂಬಕ್ಕೆ ಪರಿಹಾರ ಕೊಟ್ಟ ಸಚಿವ ಪ್ರಭು ಚವ್ಹಾಣ್

 ರೈಸಿಂಗ್ ಕನ್ನಡ:

ಬೀದರ್:

ಕಳೆದ ಕೆಲ ದಿನಗಳ  ಹಿಂದೆ ಭಾಲ್ಕಿ ತಾಲೂಕಿನ ಚಳಕಾಪುರವಾಡಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರ ಮನೆಗೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಮೃತ ಕುಟುಂಬದ ಮನೆಗಳಿಗೆ  ಭೇಟಿ ನೀಡಿ‌ ಸಾಂತ್ವಾನ ಹೇಳಿ ಪರಿಹಾರ ನೀಡಿದರು.

ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಆಘಾತದಲ್ಲಿದ್ದ ರೈತನ ಕುಟುಂಬದ ಸದಸ್ಯರಿಗೆ ಸಚಿವರು ಇದೆ ವೇಳೆಯಲ್ಲಿ ಸಾಂತ್ವನ ಹೇಳಿದರು. ಘಟನೆಯ ಕುರಿತು ಕುಟುಂಬದವರಿಂದ ಮಾಹಿತಿ ಪಡೆದುಕೊಂಡ ಸಚಿವರು, ಇಡೀ ಕುಟುಂಬಕ್ಕೆ ಆಧಾರಸ್ಥಂಬದಂತಿದ್ದ, ಹೆತ್ತ ಮಕ್ಕಳನ್ನು ಕಳೆದುಕೊಂಡು ತಾವು ದುಃಖದಲ್ಲಿದ್ದೀರಿ. ನಾನು ನಿಮ್ಮ ಜೊತೆಗೆ ಇರುತ್ತೇನೆ ಎಂದು ಹೇಳಿದ ಸಚಿವರು, ರೈತ ಧೂಳಪ್ಪ ಬನ್ನಾಳೆ ಮತ್ತು ಕುಟುಂಬದ ಪರಿವಾರದವರಿಗೆ ಧೈರ್ಯ ತುಂಬಿದರು.

Advertisement
ಸಚಿವರ ಸಾಂತ್ವಾನ

ಈ ಬಗ್ಗೆ  ಮಾತನಾಡಿದ ಸಚಿವರು, ಮೂವರು ಮಕ್ಕಳು ನೀರಿನಲ್ಲಿ ಸಮಾಧಿಯಾಗಿ, ಅವರನ್ನು ಕಳೆದುಕೊಂಡದ್ದಕ್ಕಾಗಿ ಕುಟುಂಬದ ಎಲ್ಲ ಸದಸ್ಯರು ದುಃಖದಲ್ಲಿದ್ದಾರೆ. ಅವರಿಗೆ ಸಾಕಷ್ಟು ಆಘಾತವಾಗಿದೆ. ಈ ಸುದ್ದಿ ಕೇಳಿ ತಮ್ಮ ಮನಸಿಗೆ ಕೂಡ ಬಹಳಷ್ಟು ನೋವಾಯಿತು. ಈ ಘಟನೆಯಿಂದ ಈ ಗ್ರಾಮಸ್ಥರಷ್ಟೇ ಅಲ್ಲ, ಇಡೀ ಜಿಲ್ಲೆಯ ಜನರು ದುಃಖದಲ್ಲಿದ್ದಾರೆ ಎಂದರು.

ವ್ಯವಸಾಯಕ್ಕಾಗಿ ಆಕಳು:

ಕುಟುಂಬದವರಿಗೆ ಭೇಟಿ ಮಾಡಿದ ವೇಳೆಯಲ್ಲಿ ಸಚಿವರು ತಮ್ಮ ಕಡೆಯಿಂದ ಕುಟುಂಬದವರಿಗೆ ವೈಯಕ್ತಿಕವಾಗಿ 51,000 ರೂ.ಗಳನ್ನು ನೀಡಿದರು. ಬಡ ರೈತ ಕುಟುಂಬಕ್ಕೆ ಆಸರೆಯಾಗಲೆಂದು, ಕುಟುಂಬದವರು ವ್ಯವಸಾಯ ಮಾಡಲು ಸಹಕಾರಿಯಾಗಲೆಂದು ತಮ್ಮ ಕಡೆಯಿಂದ ಎರಡು ಆಕಳುಗಳನ್ನು ಶೀಘ್ರ ಕೊಡುವುದಾಗಿ ಸಚಿವರು ತಿಳಿಸಿದರು. ನಿಮ್ಮ ಮಗಳ ಮದುವೆಗೆ ಕೂಡ ಸಹಾಯ ಮಾಡುತ್ತೇನೆ ಎಂದು ತಿಳಿಸಿ ಸಚಿವರು ಕುಟುಂಬದವರಿಗೆ ಧೈರ್ಯ ತುಂಬಿದರು.

ಈ ವೇಳೆ ಭಾಲ್ಕಿ ತಹಸೀಲ್ದಾರ ಅಣ್ಣಾರಾವ್ ಪಾಟೀಲ ಹಾಗೂ ಇತರರು ಇದ್ದರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ