Featured
ರಾಜ್ಯದಲ್ಲಿ ಮುಂದುವರೆದ ಕೊರೊನಾ ಆರ್ಭಟ: 7,908 ಹೊಸ ಕೇಸ್: 104 ಮಂದಿ ಬಲಿ

ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಶುಕ್ರವಾರ ದಾಖಲೆಯ 7,908 ಕೊರೊನಾ ಸೋಂಕು ಪತ್ತೆಯಾಗಿದೆ. ಜೊತೆಗೆ ಸಾವಿನಲ್ಲೂ ಕೊರೊನಾ ಅಬ್ಬರಿಸಿದ್ದು ಸತತ ಎರಡನೇ ದಿನವೂ ಶತಕ ಬಾರಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಶುಕ್ರವಾರ 7,908 ಹೊಸ ಕೊರೊನಾ ಕೇಶ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,11,108ಕ್ಕೆ ಏರಿದೆ.
ಇನ್ನು ಸಾವಿನಲ್ಲೂ ಮರಣ ಮೃದಂಗ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 104 ಮಂದಿ ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 3,717ಕ್ಕೆ ಏರಿದೆ.
ರಾಜ್ಯದಲ್ಲಿ ಒಟ್ಟು 80,883 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಶುಕ್ರವಾರ 5,257 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು ಈವರೆಗೂ 1,21,242 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಹೊಸ ಕೇಸ್ ಪತ್ತೆಯಾಗಿದೆ. ನಗರದಲ್ಲಿ ಒಟ್ಟು 84,185ಕ್ಕೆ ಏರಿದೆ. ಬೆಂಗಳೂರಿನಲ್ಲಿ 22 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 1,360ಕ್ಕೆ ಏರಿದೆ.ನಗರದಲ್ಲಿ ಒಟ್ಟು 35,117 ಸಕ್ರಿಯ ಪ್ರಕರಣಗಳಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?