Featured
ಬಹು ಅಂಗಾಂಗ ವೈಫಲ್ಯ: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ವಿಧಿವಶ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಕೊರೊನಾ ಸೋಂಕಿಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಚೇತನ್ ಚೌಹಾಣ್ ಕೊನೆಯುಸಿರೆಳೆದಿದ್ದಾರೆ.
73 ವರ್ಷದ ಮಾಜಿ ಆಟಗಾರ ಚೇತನ್ ಚೌಹಾಣ್ ಕಳೆದು ಜು.12ರಂದು ಕೊರೊನಾ ಸೋಂಕಿಗೆ ಗುರಿಯಾಗಿ ಲಖನೌನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಕಿಡ್ನಿ ವೈಫಲ್ಯ ಸಮಸ್ಯೆ ಉಲ್ಭಣಿಸಿತ್ತು.
ಭಾನುವಾರ ಬೆಳಗ್ಗೆ ಕಿಡ್ನಿ ಸಮಸ್ಯೆ ಮತ್ತುಷ್ಟು ಬಿಗಡಾಯಿಸಿದ್ದರಿಂದ ಬಹುಅಂಗಾಂಗ ವೈಫಲ್ಯ ಕಾರಣವಾಯಿತು. ನಂತರ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ಭಾನುವಾರ ಸಂಜೆ ಚೇತನ್ ಚೌಹಾಣ್ ಇಹಲೋಕ ತ್ಯಜಿಸಿದರು.
ಉತ್ತರ ಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ಸಚವರು ಆಗಿದ್ದ ಚೇತನ್ ಚೌಹಾಣ್ ಟೀಮ್ ಇಂಡಿಯಾ ಪರ ಕ್ರಿಕೆಟ್ ದಂತ ಕತೆ ಸುನಿಲ್ ಗಾವಸ್ಕರ್ ಜೊತೆಗೂಡಿ 40 ಟೆಸ್ಟ್ ಪಂದ್ಯಗಳನ್ನ ಆಡಿದ್ದರು.
ಚೇತನ್ ಚೌಹಾಣ್ ದೆಹಲಿ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ಅಧ್ಯಕ್ಷ,ಉಪಾಧ್ಯಕ್ಷ, ಕಾರ್ಯದರ್ಶಿ, ಆಯ್ಕೆ ಸಮಿತಿ ಮುಖ್ಯಸ್ಥ ಹಾಗೂ ಟೀಮ್ ಇಂಡಿಯಾದ ಮ್ಯಾನೇಜರ್ರಾಗಿಯೂ ಕೆಲಸ ಮಾಡಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?