Featured
ಚಿಕ್ಕೋಡಿಯಲ್ಲಿ ಲಾರಿ- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಸವಾರರ ಸಾವು

ರೈಸಿಂಗ್ ಕನ್ನಡ :
ಚಿಕ್ಕೋಡಿ:
ಕಂಟೇನರ್ ಲಾರಿ ಹಾಗೂ ದ್ವಿಚಕ್ರವಾಹನಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ಸವಾರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಈ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ದ್ವಿಚಕ್ರವಾಹನ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರಾಗಿದ್ದಾರೆ.
ಮೃತರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ ಅವರ ವಿಳಾಸ ಮಾತ್ರ ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಂಕೇಶ್ವರ ಪಿಎಸ್ ಐ ಗಣಪತಿ ಕೊಂಗನೊಳಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?