Connect with us

Featured

ಶ್ರೀ ವಿಷ್ಣು ಸಹಸ್ರನಾಮ ಮತ್ತು ಅದರ ಮಹತ್ವದ ಬಗ್ಗೆ ಹಿರಿಯರೊಬ್ಬರಿಂದ ಕೇಳಿ ತಿಳಿದ ವಿಚಾರ ….

ಬರಹ: ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ ಮತ್ತು ವಾಸ್ತುತಜ್ಞರು – 9972848937

ತಿರುಚ್ಚಿಯ ಶ್ರೀರಂಗನಾಥ ದೇವಸ್ಥಾನ , ಅಲ್ಲಿ ಬೆಳಗಿನ ಪೂಜೆ ಆದ ಬಳಿಕ ದೇವರಿಗೆ ಸಮರ್ಪಣೆ ಮಾಡಿದ ಪ್ರಸಾದವನ್ನು ನೆರೆದ ಭಕ್ತರಿಗೆ ಹಂಚುವುದು ವಾಡಿಕೆ .ಹಾಗೆ ಅದನ್ನು ಸ್ವೀಕರಿಸಲು ಭಕ್ತರೆಲ್ಲರೂ ಸರದಿಯ ಸಾಲಿನಲ್ಲಿ ಬಂದು ಭಕ್ತಿಯಿಂದ ಸ್ವೀಕರಿಸುತ್ತಿದ್ದಾಗ ಕಡು ಬಡವ ಹಿರಿಯರೊಬ್ಬರು ಸರದಿಯ ಸಾಲಿನಲ್ಲಿ ನಿಲ್ಲದೆ ಎಲ್ಲರನ್ನು ದೂಡಿ ಮುಂದೆ ಹೋಗಿ ನಿಲ್ಲುತ್ತಿದ್ದರು. ಅಲ್ಲದೆ ಕೈಯಲ್ಲಿ ದೊಡ್ಡದೊಂದು ಪಾತ್ರೆಯನ್ನು ಹಿಡಿದು ಪ್ರಸಾದವನ್ನು ಕೇಳುತ್ತಿದ್ದರು. ನಾನು ಬಡವ ನನಗೆ 6 ಜನ ಮಕ್ಕಳಿದ್ದಾರೆ , ಇದು ಸಿಗದಿದ್ದರೆ ಅವರೆಲ್ಲ ನಿರಾಹಾರರಾಗ ಬೇಕಾಗುತ್ತದೆ ಎನ್ನುತ್ತಾ ಪ್ರಸಾದವನ್ನು ಕೇಳಿ ಪಡೆಯುತ್ತಿದ್ದರು. ಆದರೆ ಇದು ಪ್ರಸಾದ ಹಂಚುವ ದೇವಸ್ಥಾನದವರಿಗೆ ಮುಜುಗರ ತರುತ್ತಿತ್ತು, ಹಾಗಾಗಿ ಅವರು ನೇರವಾಗಿ ಶ್ರೀಪಾದ ರಾಮಾನುಜರ ಬಳಿ ದೂರು ಕೊಟ್ಟರು.

ಇದನ್ನು ಕೇಳಿದ ಶ್ರೀಪಾದ ರಾಮಾನುಜರು ಆ ಬಡವನನ್ನು ನೋಡಿ ವಿಚಾರ ತಿಳಿಯಲೆಂದು ಒಂದು ದಿನ ಪ್ರಸಾದ ಹಂಚುವಲ್ಲಿಗೆ ಬಂದು ಆ ಬಡವ ಹಿರಿಯರನ್ನು ಕಂಡು ಯಾಕೆ ಹೀಗೆ ಮಾಡುತ್ತೀರಿ ಎನ್ನಲು . ಆ ಬಡವ ಹಿರಿಯರು ಸ್ವಾಮಿ ನಾನು ಬಡವ ನನಗೆ 6 ಜನ ಸಣ್ಣಸಣ್ಣ ಮಕ್ಕಳಿದ್ದಾರೆ , ಹೊಟ್ಟೆಗೆ ಗತಿಯಿಲ್ಲ ಹಾಗಾಗಿ ನಾನು ಎಲ್ಲರನ್ನು ಹಿಂದೆಹಾಕಿ ಮುಂದೆನಿಂತು ಪಾತ್ರೆಯಲ್ಲಿ ಪ್ರಸಾದ ಕೇಳುತ್ತೇನೆ. ಸಾಲಿನಲ್ಲಿ ನಿಂತರೆ ಎಲ್ಲಿ ಪ್ರಸಾದ ಖಾಲಿಯಾಗುತ್ತದೆಯೋ ಅನ್ನುವ ತವಕ..

Advertisement

ವಿಚಾರ ತಿಳಿದ ಶ್ರೀಪಾದ ರಾಮಾನುಜರು ಆ ಹಿರಿಯರನ್ನು ನಿಮಗೆ ಶ್ರೀ ವಿಷ್ಣುಸಹಸ್ರನಾಮ ಹೇಳಲು ಬರುತ್ತದೆಯೋ ಅನ್ನಲು ಹಿರಿಯರು ನಾನು ಕಲಿತವನಲ್ಲ .. ಆದರೆ ಇಲ್ಲಿ ದೇವಸ್ಥಾನದಲ್ಲಿ ಅಲ್ಪ ಸ್ವಲ್ಪ ಕೇಳಿದ್ದೇನೆ.. ಶ್ರೀ ವಿಷ್ಣುಸಹಸ್ರನಾಮವನ್ನು…ಹಾಗಾದರೆ ನಿನಗೆ ಬರುವಷ್ಟು ಹೇಳು ಅನ್ನಲು ಆತ ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ …

ಭೂತಕೃದ್ಭೂತಭೃದ್ಭಾವೋ … ಅನ್ನುತ್ತಲೇ ಶ್ರೀರಾಮಾನುಜರು ಅಂದರೆ ನಿನಗೆ ಶ್ರೀ ವಿಷ್ಣುವಿನ ಸಾವಿರ ಹೆಸರಿನಲ್ಲಿ ಆರು ಹೆಸರು ಮಾತ್ರ ಬರುತ್ತದೆ .. ಹೌದು ನಾನು ಕಲಿತವನಲ್ಲ… ಆಗ ಶ್ರೀಪಾದರು ಅದಕ್ಕೇನು ಬೇಸರವಿಲ್ಲ ಅದರಲ್ಲಿ ಬರುವ ಆರನೆಯ ಹೆಸರು ಭೂತ-ಭೃತ್: ಅಂದರೆ ಎಲ್ಲಾ ಜೀವಿಗಳನ್ನು ಪೋಷಿಸುವವನು ಎಂದು , ನೀನು ಶ್ರದ್ದೆ ಮತ್ತು ಸಂಪೂರ್ಣ ಭಕ್ತಿಯಿಂದ ಆ ಆರನೆಯ ಹೆಸರನ್ನು ಜಪಮಾಡು ಅದರಿಂದ ನಿನ್ನ ಕಷ್ಟ ಪರಿಹಾರವಾಗುತ್ತದೆ ಎಂದು ಆತನಿಗೆ ಶ್ರೀ ಭೂತ-ಭೃತ್ಯಯೇ ನಮಃ ಅನ್ನುವಂತೆ ಉಪದೇಶಿಸಿದರು..

ಕೆಲದಿನಗಳ ಬಳಿಕ ಶ್ರೀಪಾದರು ಪ್ರಸಾದ ಹಂಚುವವರನ್ನು ಆ ಹಿರಿಯ ವಿಚಾರದಲ್ಲಿ ಕೇಳಿದಾಗ ಅವರು ಸ್ವಾಮಿ ಅವರು ಈಗ ಬರುತ್ತಿಲ್ಲ . ಏನಾಗಿದೆ ಅಂತ ಗೊತ್ತಿಲ್ಲ. ಬಹಳಷ್ಟು ಸಮಯ ವಾಯಿತು ಅವರನ್ನು ನೋಡದೆ.. ಆದರೆ ಒಂದು ವಿಚಾರ ದೇವರಿಗೆ ಸಮರ್ಪಣೆ ಮಾಡಿದ ಪ್ರಸಾದ ಪೂಜೆಯ ಬಳಿಕ ನೋಡಿದರೆ ಯಾರೋ ತೆಗೆದಂತೆ ಕಾಣುತ್ತದೆ . ಆ ಹಿರಿಯರು ಹೇಗೋ ಬಂದು ಅದನ್ನು ತೆಗೆಯುತ್ತಾರಾ ಏನೋ ಅನ್ನುವ ಸಂಶಯ ವ್ಯಕ್ತ ಪಡಿಸಿದರು. ಶ್ರೀಪಾದರು ಒಂದು ದಿನ ನೋಡಲು ಪ್ರಸಾದ ಪೂಜೆಯ ಬಳಿಕ ಕಮ್ಮಿಯಾದದ್ದನ್ನು ಕಂಡು…

ಶ್ರೀಪಾದರು ಆ ಹಿರಿಯರನ್ನು ಕಾಣಲು ನದಿಯನ್ನು ದಾಟಿ ಹಿರಿಯರಿದ್ದ ಸಣ್ಣ ಗುಡಿಸಲಿನತ್ತ ಹೋದಾಗ ಹಿರಿಯರು ಶ್ರೀಪಾದರ ಕಾಲಿಗೆ ನಮಸ್ಕರಿಸಿ ತಾವು ಮಹಾನ್ ಮಹಿಮರು ನಮ್ಮ ಕಷ್ಟಗಳೆಲ್ಲ  ಪರಿಹಾರವಾಯಿತು. ಅಲ್ಲಿಗೆ ಪ್ರಸಾದಕ್ಕೆ ಬರಬೇಕಾಗಿಲ್ಲ ದಿನಾ ನೀವು ಕಳುಹಿಸಿದ ಹುಡುಗ ಬಂದು ನಮಗೆ ಬೇಕಾದಷ್ಟು ಪ್ರಸಾದವನ್ನು ಕೊಟ್ಟು ಹೋಗುತ್ತಿದ್ದಾನೆ . ನಿಮಗೆ ತುಂಬುದು ಹೃದಯದ ಧನ್ಯವಾದಗಳು ಅನ್ನುತ್ತಲೇ ಶ್ರೀಪಾದರಿಗೆ ಅರಿವಾಯಿತು ಇದೆಲ್ಲ ಶ್ರೀ ರಂಗನಾಥನ ಮಹಿಮೆ ….

ಭೂತ-ಭೃತ್: ಎಲ್ಲಾ ಜೀವಿಗಳನ್ನು ಪೋಷಿಸುವವನು ಅವನೇ ಹಾಗಿರುವಾಗ ಭಕ್ತಿಯಿಂದ ಪೂಜಿಸಿದ ಜಪಮಾಡಿದ ಹಿರಿಯರನ್ನು ಹೇಗೆಬಿಟ್ಟುಹೋಗುತ್ತಾನೆ ಎಂದು ಮನದಲ್ಲಿಯೇ ನೆನೆಸಿದರು. ಅಲ್ಲದೆ ಭಗವದ್ಗೀತೆಯಲ್ಲಿ ಶ್ರೀ ಕೃಷ್ಣ ಹೇಳಿದ ಮಾತು ಮತ್ತೆ ನೆನಪಾಯಿತು. ನಚ ಮಸ್ತಾನಿ ಭೂತಾನಿ .. ಪಶ್ಯಾಮಿ ಯೋಗ ಮಸ್ವರಂ..

Advertisement

ಶ್ರೀ ವಿಷ್ಣುಸಹಸ್ರನಾಮದ ಪ್ರತಿಯೊಂದು ಹೆಸರು ಅದರದೇ ಆದ ಮಹತ್ವವನ್ನು ಹೊಂದಿದೆ ಅದನ್ನು ಅರಿತು ಪಠಿಸಿದರೆ ಒಳ್ಳೆಯದು…

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ