Featured
ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಕೆ: ಮುಂದಿನ ಸಭೆಯಲ್ಲಿ ಹೊಸ ಅಧ್ಯಕ್ಷರ ನೇಮಕ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಸುದೀರ್ಘ ಸಾಕಷ್ಟು ಚರ್ಚೆಗಳ ಬಳಿಕ ಕಾಂಗ್ರೆಸ್ ಅಧಿ ನಾಯಕಿ ಸೋನಿಯಾ ಗಾಂಧಿ ಅವರನ್ನ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರೆಸಲು ನಿರ್ಧಾರಿಸಲಾಗಿದ್ದು ಮುಂದಿನ ಆರು ತಿಂಗಳಲ್ಲಿ ಹೊಸ ಅಧ್ಯಕ್ಷರ ನೇಮಕ ಮಾಡಲು ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ(ಸಿಡಬ್ಲ್ಯುಸಿ) ನಿರ್ಧರಿಸಿದೆ.
ಸೋಮವಾರ ನಡೆದ ಸಿಡಬ್ಲ್ಯುಸಿ ಸಭೆ ಹಲವಾರು ನಾಟಕೀಯ ಪ್ರಸಂಗಗಳಿಗೆ ಸಾಕ್ಷಿಯಾಯಿತು. ಮುಖ್ಯವಾಗಿ ಪಕ್ಷದಲ್ಲಿ ನಾಯಕತ್ವದ ಬದಲಾವಣೆ ಕುರಿತು ಗುಲಾಂ ನಬಿ ಅಜಾದ್ ಸೇರಿದಂತೆ 23 ನಾಯಕರು ಬರೆದ ಪತ್ರ ವಿಚಾರ ಪಕ್ಷದೊಳಗೆ ಸಂಘರ್ಷಕ್ಕೆ ಕಾರಣವಾಗಿದೆ.
ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್ ದೊಡ್ಡ ಕುಟುಂಬವಿದ್ದಂತೆ.ನನಗೆ ಯಾರ ವಿರುದ್ಧವೂ ದ್ವೇಷವಿಲ್ಲ. ಪಕ್ಷದ ವೇದಿಕೆಯಲ್ಲಿ ಮಾತ್ರ ನಿಮ್ಮ ಅಭಿಪ್ರಾಯಗಳನ್ನ ಹೇಳಿ ಎಂದು ಸಲಹೆ ನೀಡಿದ್ದಾರೆ.
ಮುಂದಿನ ಸಿಡಬ್ಲ್ಯುಸಿ ಸಭೆಯಲ್ಲಿ ಹೊಸ ಅಧ್ಯಕ್ಷರನ್ನ ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪ್ರಿಯಾಂಕ ವಾದ್ರಾ, ಗುಲಾಂ ನಬಿ ಅಜಾದ್, ಚಿದಂಬರಂ ಮತ್ತಿತರ ನಾಯಕರು ಹಾಜರಿದ್ದರು ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?