Featured
ರಾಶಿ ಭವಿಷ್ಯ ಗುರುವಾರ| ಆಗಸ್ಟ್ 27, 2020
![](https://risingkannada.com/wp-content/uploads/2020/08/Rashi-27.jpg)
ಫಲ 27/08/2020, ಗುರುವಾರ
ಮೇಷ:
ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು.
ವೃಷಭ:
ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ.
ಮಿಥುನ:
ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
ಕಟಕ:
ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
ಸಿಂಹ:
ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು.
ಕನ್ಯಾ :
ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವದು.
ತುಲಾ :
ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವದು.
ವೃಶ್ಚಿಕ :
ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು.
ಧನಸ್ಸು:
ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು.
ಮಕರ:
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಕುಂಭ:
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
ಮೀನ:
ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು.
![BIDAR EDUCATION](https://risingkannada.com/wp-content/uploads/2020/08/BIDAR-EDUCATION-1024x460.jpg)
You may like
ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ
ಈ ರಾಶಿಯವರಿಗೆ ಸಂಜೆ ಮೇಲೆ ಕಾದಿದೆ ಕಂಟಕ!
ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ
ರವಿ ಗ್ರಹ ಪಿತೃಕಾರಕನಾದರೆ ಚಂದ್ರ ಗ್ರಹ ಮಾತೃಕಾರಕನಾಗಿರುವನು
ಪುರಾಣ ಎಂದರೇನು? ಎಷ್ಟು ಪುರಾಣಗಳಿವೆ ? ಯಾರು ರಚಿಸಿದ್ದಾರೆ?
ಗೃಹಸ್ಥ ಧರ್ಮ..! ಒಬ್ಬ ಗೃಹಸ್ಥನಾದವ ಮೂರು ರೀತಿಯಲ್ಲಿ ಇರಬೇಕಂತೆ…