Featured
ತೆರಿಗೆ ವಂಚನೆ ಪ್ರಕರಣ:ಡಿ.ಕೆ.ಶಿವಕುಮಾರ್ ವಿರುದ್ಧದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಮತ್ತೊಂದು ಹಿನ್ನಡೆಯಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ.
2016 – 17 ಆರ್ಥಿಕ ವರ್ಷದಲ್ಲಿ ಡಿಕೆ ಶಿವಕುಮಾರ್ ತೆರಿಗೆ ವಂಚನೆ ಮಾಡಿದ್ದಾರೆಂದು ಐಟಿ ಇಲಾಖೆ ಪ್ರಕರಣ ದಾಖಲಿಸಿಕೊಂಡಿತ್ತು. 2019 ಮಾರ್ಚ್ ತಿಂಗಳಿನಲ್ಲಿ ಡಿ.ಕೆ ಶಿವಕುಮಾರ್ ದೆಹಲಿಯ ಫ್ಲ್ಯಾಟ್ಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

ಈ ವೇಳೆ ಅಕ್ರಮ ಹಣ ಮತ್ತು ಆಸ್ತಿಲೆಕ್ಕ ಪತ್ರಗಳನ್ನು ಪತ್ತೆ ಮಾಡಲಾಗಿತ್ತು. ಈ ಸಂಬಂಧ ಇ.ಡಿ, ಶಿವಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 120-‘ಬಿ’ (ಅಪರಾಧಿಕ ಒಳಸಂಚು) ಅನುಸಾರ ಪ್ರಕರಣ ದಾಖಲಿಸಿದೆ. ಅಲ್ಲದೆ ಆದಾಯ ತೆರಿಗೆ ಕಾಯ್ದೆ-1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ ಎಂಬ ಆರೋಪ ಡಿಕೆಶಿ ಮೇಲಿದೆ
ಇದೇ ವೇಳೆ ಅಕ್ರಮ ಹಣಕಾಸು ವರ್ಗಾವಣೆ ಆರೋಪಡಿಯಡಿ ಡಿಕೆ ಶಿವಕುಮಾರ್ ವಿರುದ್ದ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೊಳಪಡಿಸಿತ್ತು.
ತಿಹಾರ್ ಜೈಲಿನಲ್ಲಿ ಬಂಧನಕ್ಕೊಳಗಾಗಿದ್ದ ಡಿಕೆಶಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಈಗ ಸುಪ್ರೀಂ ಕೋರ್ಟ್ ಆದಾಯ ತೆರಿಗೆ ವಂಚನೆ ಪ್ರಕರಣದ ಕೇಸ್ ತನಿಖೆಗೂ ತಡೆ ನೀಡಲು ನಿರಾಕರಿಸಿದೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?