Featured
ಬಿಹಾರ ಚುನಾವಣೆ ಮುಂದೂಡಿಕೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ- ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದ ಸುಪ್ರೀಂ
![](https://risingkannada.com/wp-content/uploads/2020/08/Election.jpg)
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕೋವಿಡ್19 ನೆಪದಲ್ಲಿ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸಾಂಕ್ರಾಮಿಕ ರೋಗ ಕೊರೊನಾ ಹಿನ್ನಲೆಯಲ್ಲಿ ಬಿಹಾರ ಚುನಾವಣೆಯನ್ನು ರದ್ದು ಪಡಿಸಬೇಕೆಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಚುನಾವಣೆಯನ್ನು ನಿಲ್ಲಿಸಲು ಕೋವಿಡ್ ಸೋಂಕು ಮುಖ್ಯ ಕಾರಣವಾಗಬಾರದು. ಅಲ್ಲದೇ ಚುನಾವಣಾ ಆಯೋಗದ ಅಧಿಕಾರದ ಬಗ್ಗೆ ಮಧ್ಯಪ್ರವೇಶಿಸಲ್ಲ. ಇನ್ನೂ ಚುನಾವಣಾ ದಿನಾಂಕವನ್ನೂ ಆಯೋಗ ಘೋಷಿಸಿಲ್ಲ, ನೋಟಿಫಿಕೇಶನ್ ಕೂಡಾ ಹೊರಡಿಸಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಚುನಾವಣೆ ನಡೆಸುವ ಮುನ್ನ ಚುನಾವಣಾ ಆಯೋಗ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಮತ್ತು ಪ್ರತಿಯೊಂದನ್ನು ಪರಿಗಣಿಸಲಿದೆ ಎಂದು ಸುಪ್ರೀಂಕೋರ್ಟ್ ಅರ್ಜಿದಾರ ಅವಿನಾಶ್ ಠಾಕೂರ್ ಗೆ ತಿಳಿಸಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?